ಮಂಡ್ಯ: ನಗರದಲ್ಲಿ ಶನಿವಾರ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದು ಅವಾಂತರ ಸೃಷ್ಟಿಸಿತ್ತು. ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಗಾಳಿಯ ಅಬ್ಬರವೂ ಜೋರಾಗಿತ್ತು. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಶನಿವಾರ ಬೆಳಗ್ಗೆಯಿಂದ ಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಮೋಡ ಕವಿದಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನಗರದ ರಸ್ತೆಗಳು ಜಲಾವೃತಗೊಂಡಿದ್ದವು. ಮಳೆ ನೀರಿನ ನಡುವೆ ವಾಹನಗಳ ಸವಾರರು ಪರದಾಡಿದರು. ಹಾಲಹಳ್ಳಿ ಬಡಾವಣೆ, ಬೀಡಿ ಕಾರ್ಮಿಕರ ಕಾಲೋನಿ, ಶಂಕರನಗರ ಸೇರಿದಂತೆ ನಗರದ ಅನೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು.
ಇದನ್ನೂ ಓದಿ: ಮದುವೆಯಾದ್ರೂ ಇನಿಯನ ತೆಕ್ಕೆಯಲ್ಲಿ ಮಹಿಳೆ: ಬೆಂಗಳೂರಲ್ಲಿ ಬಿತ್ತು ಹೆಣ.. ಠಾಣೆಗೆ ಶವ ತಂದು ಆರೋಪಿಗಳು ಶರಣು
ಅರಬ್ಬೀ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಹಲವೆಡೆ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ.