ETV Bharat / state

ಕಲ್ಲು ಗಣಿ ನಿಷೇಧ ಆದೇಶ ರದ್ದುಗೊಳಿಸಿದ ಹೈಕೋರ್ಟ್‌: 28 ಗಣಿ ಮಾಲೀಕರಿಗೆ ತಾತ್ಕಾಲಿಕ ರಿಲೀಫ್ - ban of krs stone mining order

ಕೆಆರ್​ಎಸ್ ಸುತ್ತಮುತ್ತ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ 28 ಕಲ್ಲು ಗಣಿಗಾರಿಕೆ ಮಾಲೀಕರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಕಾನೂನು ಪ್ರಕ್ರಿಯೆ ಪಾಲಿಸದೇ ಗಣಿಗಾರಿಕೆಯ ಲೈಸೆನ್ಸ್ ರದ್ದು ಮಾಡಿದ್ದ ಮಂಡ್ಯ ಜಿಲ್ಲಾಧಿಕಾರಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ರದ್ದು ಗೊಳಿಸಿದೆ.

ಹೈಕೋರ್ಟ್‌
ಹೈಕೋರ್ಟ್‌
author img

By

Published : Sep 17, 2021, 12:50 PM IST

ಮಂಡ್ಯ: ಕೆಆರ್​ಎಸ್‌ ಅಣೆಕಟ್ಟೆ ಸುರಕ್ಷತೆ ದೃಷ್ಟಿಯಿಂದ ಬೇಬಿ ಬೆಟ್ಟದಲ್ಲಿ ಜಿಲ್ಲಾಡಳಿತ ಜಾರಿಗೊಳಿಸಿದ್ದ ಕಲ್ಲು ಗಣಿ ನಿಷೇಧ ಅದೇಶವನ್ನು ಇದೀಗ ಹೈಕೋರ್ಟ್‌ ರದ್ದುಗೊಳಿಸಿದ್ದು, ಈ ಮೂಲಕ 28 ಗಣಿ ಮಾಲೀಕರಿಗೆ ರಿಲೀಫ್ ದೊರೆತಿದೆ.

ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆ ವಿರುದ್ಧ ಜಿಲ್ಲಾಡಳಿತ ಕಳೆದ ಜು.31ರಂದು ನಿಷೇಧಾಜ್ಞೆ ಜಾರಿಗೊಳಿಸಿ, 28 ಗಣಿ ಮಾಲೀಕರ ಗುತ್ತಿಗೆಯನ್ನು ರದ್ದುಪಡಿಸಿತ್ತು. ಯಾವುದೇ ಸಕಾರಣ ನೀಡದೇ ಕಾನೂನಾತ್ಮಕವಾಗಿ ಗಣಿಗಾರಿಕೆ ನಡೆಸುತ್ತಿದ್ದವರ ಗುತ್ತಿಗೆಯನ್ನು ರದ್ದುಪಡಿಸಿರುವ ಜಿಲ್ಲಾಡಳಿತದ ಕ್ರಮದ ವಿರುದ್ಧ ಗಣಿ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಬೇಬಿ ಬೆಟ್ಟದಲ್ಲಿ ಗಣಿ ನಿಷೇಧ ಆದೇಶ ಹೇರಿದ್ದ ಜಿಲ್ಲಾಡಳಿತ, ಕಾನೂನಾತ್ಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಲ್ಲ. ಗಣಿ ಗುತ್ತಿಗೆ ಪಡೆದವರಿಗೆ ನೋಟಿಸ್ ನೀಡಿ ಉತ್ತರ ಪಡೆದುಕೊಂಡಿದ್ದರೂ ವಿಚಾರಣೆಗೆ ಅವಕಾಶ ಕಲ್ಪಿಸಿ ಅವರಿಂದ ಅಭಿಪ್ರಾಯಗಳನ್ನು ಆಲಿಸಿಲ್ಲ.

ಹಾಗಾಗಿ ಮುಂದಿನ 15 ದಿನಗಳೊಳಗೆ ಅವರು ಹೇಳಿಕೆ ನೀಡುವುದಕ್ಕೆ ಅನುವು ಮಾಡಿಕೊಟ್ಟು ನಂತರ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ, ಗಣಿ ಮಾಲೀಕರಿಗೂ ಆಕ್ಷೇಪಣಾ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಮಾಡಿಕೊಟ್ಟಿದೆ.

ಕೋರ್ಟ್‌ಗೆ ಮನವರಿಕೆ ಮಾಡುವಲ್ಲಿ ವಿಫಲ?:

ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷ್ಣರಾಜಸಾಗರ ಅಣೆಕಟ್ಟೆಯ ಮೇಲೆ ಉಂಟಾಗುವ ಪರಿಣಾಮಗಳ ಕುರಿತಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆಯೇ ಎಂಬ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿವೆ.

ಗಣಿ ಮಾಲೀಕರ ಒತ್ತಡ, ಪ್ರಭಾವಕ್ಕೆ ಮಣಿದು ಕಾನೂನಾತ್ಮಕವಾಗಿ ದಿಟ್ಟ ಹೆಜ್ಜೆಯನ್ನಿಡುವುದಕ್ಕೆ ಧೈರ್ಯ ತೋರದ ಜಿಲ್ಲಾಡಳಿತ, ಗಣಿ ಮಾಲೀಕರ ವಿರುದ್ಧದ ಕಾನೂನು ಹೋರಾಟದ ಬಗ್ಗೆ ವಹಿಸಿದ ನಿರ್ಲಕ್ಷ್ಯದಿಂದಾಗಿ ಹೈಕೋರ್ಟ್ ಗಣಿಗಾರಿಕೆ ಮೇಲಿನ ನಿಷೇಧಾಜ್ಞೆ ಆದೇಶವನ್ನು ರದ್ದುಗೊಳಿಸಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.

ನಿರ್ಲಕ್ಷ್ಯ ವಹಿಸಿದ ಜಿಲ್ಲಾಡಳಿತ:

ಗಣಿಗಾರಿಕೆ ವಿಚಾರ ಉದ್ಭವಿಸಿದಾಗಲೆಲ್ಲ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿ ಸುಮ್ಮನಾಗುವುದು ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಯಾವುದೇ ಕಾನೂನು ಪ್ರಕ್ರಿಯೆ ನಡೆಸುವ ಗೋಜಿಗೆ ಹೋಗದೇ ವಹಿಸುತ್ತಿರುವ ನಿರ್ಲಕ್ಷ್ಯವೇ ನಿಷೇಧಾಜ್ಞೆ ಪದೇ ಪದೆ ಹೈಕೋರ್ಟ್‌ನಿಂದ ರದ್ದಾಗುವುದಕ್ಕೆ ಪ್ರಮುಖ ಕಾರಣವಾಗಿದೆ ಎಂಬ ಆರೋಪ ಬಲವಾಗಿ ಕೇಳಿ ಬಂದಿದೆ.

2018 ರಿಂದಲೇ ಅನೇಕ ಬಾರಿ ಜಿಲ್ಲಾಡಳಿತ ಬೇಬಿ ಬೆಟ್ಟದಲ್ಲಿ ಜಾರಿಗೊಳಿಸಿದ ಕಲ್ಲು ಗಣಿ ನಿಷೇಧಾಜ್ಞೆ ಆದೇಶಗಳು ರದ್ದುಗೊಂಡಿದ್ದು, ಇದೀಗ ಹೈಕೋರ್ಟ್ ಹೊರಡಿಸಿರುವ ನಿಷೇಧಾಜ್ಞೆ ರದ್ದು ಆದೇಶ ಹೊಸದೇನಲ್ಲ. ಇದಕ್ಕೊಂದು ತಾರ್ಕಿಕ ಅಂತ್ಯ ಎಂದು ಸಿಗಲಿದೆ ಎನ್ನುವುದು ನಿಗೂಢವಾಗಿ ಉಳಿದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.