ಮಂಡ್ಯ: ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಜಿಲ್ಲೆಯ ಹಲವೆಡೆ ಅವಾಂತರ ಉಂಟಾಗಿದ್ದು, ನಾಳೆ(ಶುಕ್ರವಾರ) ಜಿಲ್ಲಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಮಳೆ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಜನರಿಗೆ ತೊಂದರೆ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಒಂದು ತಿಂಗಳೊಳಗಾಗಿ ರೈತರಿಗೆ ಬೆಳೆ ಹಾನಿ ಪರಿಹಾರ ಪಾವತಿ : ಸಚಿವ ಆರ್ ಅಶೋಕ್