ETV Bharat / state

ಗೃಹ ಸಚಿವರ ಕಾರು ತಪಾಸಣೆ ಮಾಡದ ಆರೋಪ: ಮಂಡ್ಯದಲ್ಲಿ ಇಬ್ಬರು ಪೊಲೀಸ್​ ಸಿಬ್ಬಂದಿ ಅಮಾನತು ​

author img

By

Published : Nov 27, 2019, 12:27 PM IST

ಮದ್ದೂರು ತಾಲೂಕಿನ ಚೆಕ್​ಪೋಸ್ಟ್​ನಲ್ಲಿ ನ.20 ರಂದು ಗೃಹ ಸಚಿವರ ಕಾರನ್ನು ತಪಾಸಣೆ ಮಾಡದ ಆರೋಪದ ಹಿನ್ನೆಲೆ ಇಬ್ಬರು ಪೊಲೀಸ್​ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಲ್ಲದೆ, ಇಬ್ಬರು ಚೆಕ್​ಪೋಸ್ಟ್ ಅಧಿಕಾರಿಗಳನ್ನು ಜಿಲ್ಲಾ ಚುನಾವಣಾಧಿಕಾರಿ ಇಲಾಖಾ ವಿಚಾರಣೆಗೆ ಒಳಪಡಿಸಿದ್ದಾರೆ.

Police persons suspended
ಪೊಲೀಸ್ ಸಿಬ್ಬಂದಿ ಅಮಾನತು

ಮಂಡ್ಯ: ಗೃಹ ಸಚಿವರ ಕಾರನ್ನು ತಪಾಸಣೆ ಮಾಡದ ಹಿನ್ನೆಲೆ ಮದ್ದೂರು ತಾಲೂಕಿನ ಚೆಕ್​ಪೋಸ್ಟ್​ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಇಬ್ಬರು ಪೊಲೀಸ್​ ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಜಿಲ್ಲಾ ಚುನಾವಣಾಧಿಕಾರಿ ಅವರು ಚೆಕ್​ ಪೋಸ್ಟ್​ ಅಧಿಕಾರಿಗಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಿದ್ದಾರೆ.

ನವೆಂಬರ್ 20 ರಂದು ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದರು. ಈ ಸಂದರ್ಭ ಪೊಲೀಸ್ ಸಿಬ್ಬಂದಿವೋರ್ವರು ಕಾರನ್ನು ತಡೆಯಲು ಮುಂದಾದರೂ ಚಾಲಕ ಕಾರನ್ನು ನಿಲ್ಲಿಸದೇ ತೆರಳಿದ್ದರು ಎನ್ನಲಾಗ್ತಿದೆ.

ಗೃಹ ಸಚಿವ ಬೊಮ್ಮಾಯಿ ಕಾರು ಚಾಲಕನ ವಿರುದ್ಧ ಎಫ್​ಐಆರ್​... ಕಾರಣ?

ಈ ಪ್ರಕರಣ ಕುರಿತು ಈಟಿವಿ ಭಾರತ ವರದಿ ಮಾಡಿತ್ತು. ವರದಿ ಹಿನ್ನೆಲೆಯಲ್ಲಿ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿಲ್ಲ ಎಂಬ ಆರೋಪದಡಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಚೆಕ್ ಪೋಸ್ಟ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Intro:ಮಂಡ್ಯ: ಗೃಹ ಸಚಿವರಿಂದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತ್ತು ಮಾಡಿ, ಚೆಕ್ ಪೋಸ್ಟ್ ಅಧಿಕಾರಿಗಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನವೆಂಬರ್ 20 ರಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದರು. ಈ ಸಂದರ್ಭ ಪೊಲೀಸ್ ಸಿಬ್ಬಂದಿಯೊಬ್ಬರು ಕಾರನ್ನು ತಡೆಯಲು ಮುಂದಾದರೂ ಚಾಲಕ ಕಾರನ್ನು ನಿಲ್ಲಿಸದೇ ತೆರಳಿದ್ದರು.
ಪ್ರಕರಣ ಕುರಿತು ಈಟಿವಿ ಭಾರತ್ ವರದಿ ಮಾಡಿತ್ತು. ವರದಿ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತ್ತು ಮಾಡಲಾಗಿದ್ದು, ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.