ಮಂಡ್ಯ: ಸತತ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವೃದ್ಧೆ ಸಾವಿಗೀಡಾಗಿರುವ ಘಟನೆ ಮಂಡ್ಯದ ಸಾಹುಕಾರ್ ಚನ್ನಯ್ಯ ಬಡಾವಣೆಯಲ್ಲಿ ನಡೆದಿದೆ. ಪಾರ್ವತಿಬಾಯಿ (65) ಮೃತಪಟ್ಟ ವೃದ್ಧೆ. ನಿರಂತರ ಮಳೆಯಿಂದ ಶಿಥಿಲಗೊಂಡಿದ್ದ ಮನೆಯ ಗೋಡೆ ಬುಧವಾರ ಕುಸಿದಿದ ಪರಿಣಾಮ ರಾತ್ರಿ ಮಲಗಿದ್ದ ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿದ್ದಾರೆ.
ಮನೆಯಲ್ಲಿ ಪಾರ್ವತಿಬಾಯಿ ಅವರು ಒಬ್ಬರೇ ಇದ್ದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಂಡ್ಯ ಪಶ್ಚಿಮ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು. ಮಂಡ್ಯ ಮಿಮ್ಸ್ ಶವಾಗಾರಕ್ಕೆ ಮೃತದೇಹ ರವಾನಿಸಲಾಗಿದೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಧಿಕ ಮಳೆ.. 10 ಗ್ರಾಮಗಳಿಗೆ ಜಲದಿಗ್ಭಂಧನ