ETV Bharat / state

ಮಂಡ್ಯ: ಶೀಲ ಶಂಕಿಸಿ ಮನೆಯಲ್ಲಿಯೇ ಪತ್ನಿ ಕೊಂದು ಪತಿ ಪರಾರಿ - ಮಂಡ್ಯದಲ್ಲಿ ಕೊಲೆ

ಹೆಂಡತಿ ಕೊಲೆ ಮಾಡಿ ನಾಲ್ಕು ವರ್ಷದ ಮಗನ ಜೊತೆ ಪತಿ ಪರಾರಿಯಾದ ಘಟನೆ ಮಂಡ್ಯದಲ್ಲಿ ನಡೆದಿದೆ.

Husband killed his wife and escaped with son
ಶೀಲ ಶಂಕಿಸಿ ಮನೆಯಲ್ಲಿಯೇ ಪತ್ನಿಯನ್ನು ಕೊಂದು ಪತಿ ಪರಾರಿ
author img

By

Published : Aug 16, 2023, 2:05 PM IST

Updated : Aug 16, 2023, 4:45 PM IST

ಮಂಡ್ಯ: ಶೀಲ ಶಂಕಿಸಿ ಮನೆಯಲ್ಲಿಯೇ ಪತ್ನಿ ಕೊಂದು ಪತಿ ಪರಾರಿ

ಮಂಡ್ಯ: ಪತ್ನಿಯ ಶೀಲ ಶಂಕಿಸಿ ಮನೆಯಲ್ಲಿಯೇ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಟಿ.ಬಿ. ಬಡಾವಣೆಯ ಮುಳಕಟ್ಟೆ ರಸ್ತೆಯಲ್ಲಿರುವ ಮನೆಯಲ್ಲಿ ಮಧುಶ್ರೀ (25) ಅವರನ್ನು ಬಲವಾದ ಆಯುಧದಿಂದ ಇರಿದು ಕೊಲೆ ಮಾಡಲಾಗಿದೆ. ಪತ್ನಿಯ ಶೀಲ ಶಂಕಿಸಿ ಪತಿ ಮಂಜುನಾಥ್ ಎಂಬುವವನೇ ಈ ಕೃತ್ಯ ಎಸಗಿ ಮಗನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.

ಕರಡಹಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಧುಶ್ರೀ ಅವರಿಗೆ ಐದು ವರ್ಷಗಳ ಹಿಂದೆ ಮದುವೆ ನಡೆದಿತ್ತು. ಇವರಿಗೆ ನಾಲ್ಕು ವರ್ಷದ ಮಗನಿದ್ದು, ಮಂಜುನಾಥ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದನು. ದಂಪತಿ ನಾಗಮಂಗಲ ಪಟ್ಟಣದ ಟಿ.ಬಿ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದರು. ಪತಿ ವಾರಕ್ಕೆ ಒಮ್ಮೆ ಮನೆಗೆ ಬಂದು ಹೋಗುತ್ತಿದ್ದನು. ಇತ್ತೀಚಿಗೆ ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿದ್ದರಿಂದ ಆಗಾಗ್ಗೆ ಇಬ್ಬರ ಮಧ್ಯೆ ಜಗಳ ನಡೆಯುತ್ತಲೇ ಇತ್ತು.

ಸ್ವಾತಂತ್ರ್ಯೋತ್ಸವ ದಿನವಾದ ಮಂಗಳವಾರ ಮಧ್ಯಾಹ್ನ ಬೆಂಗಳೂರಿನಿಂದ ಮಂಜುನಾಥ್ ಮನೆಗೆ ಬಂದಿದ್ದಾನೆ. ಈ ಸಂದರ್ಭದಲ್ಲಿ ದಂಪತಿ ನಡುವೆ ಮತ್ತೆ ಜಗಳ ನಡೆದಿದೆ. ಜಗಳ ತಾರಕಕ್ಕೇರಿ ಮಂಜುನಾಥ್​ ಪತ್ನಿಯ ಹೊಟ್ಟೆ ಭಾಗಕ್ಕೆ ಬಲವಾದ ಆಯುಧದಿಂದ ಇರಿದು ಹತ್ಯೆ ಮಾಡಿದ್ದಾನೆ. ಹೆಂಡತಿಯನ್ನು ಹತ್ಯೆ ಮಾಡಿದ ಮೇಲೆ ಭಯಗೊಂಡ ಆತ ಮಗ ಮನ್ವಿತ್ ನನ್ನು ಕರೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಬುಧವಾರ ಬೆಳಗ್ಗೆ ಮಧು ಎಂಬಾತ ಮನೆ ಬಳಿ ಹೋದಾಗ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ.

ಈ ಘಟನೆ ಬಗ್ಗೆ ನಾಗಮಂಗಲ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧುಶ್ರೀಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಲಕ್ಷ್ಮೀನಾರಾಯಣ ಪ್ರಸಾದ್, ಸಿಪಿಐ ನಿರಂಜನ್ ಸೇರಿದಂತೆ ಇನ್ನಿತರ ಪೊಲೀಸ್​ ಸಿಬ್ಬಂದಿ ಕೃತ್ಯ ನಡೆದ ನನಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮಾತನಾಡಿದ್ದಾರೆ. ‘‘ಮಹಿಳೆಯ ಹೊಟ್ಟೆ ಭಾಗಕ್ಕೆ ಹರಿತವಾದ ಆಯುಧದಿಂದ ಇರಿದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ತನಿಖೆ ಕೈಗೊಳ್ಳಲಾಗಿದ್ದು, ಆರೋಪಿಯನ್ನು ಪತ್ತೆ ಮಾಡಲಾಗುವುದು ಎಂದು ಯತೀಶ್​​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಯಚೂರು: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಹತ್ಯೆ ಮಾಡಿದ ಯುವಕ

Last Updated : Aug 16, 2023, 4:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.