ETV Bharat / state

ಪೋನ್ ಕದ್ದಾಲಿಕೆ ಕುರಿತು ಹಿಂದೆಯೇ ದೂರು ನೀಡಿದ್ದೆ: ಸುಮಲತಾ ಅಂಬರೀಶ್

ಪೋನ್ ಕದ್ದಾಲಿಕೆ ಕುರಿತು ಎರಡು ತಿಂಗಳ ಹಿಂದೆಯೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇ ಎಂದು ಸಂಸದೆ ಸುಮಲತಾ ಅಂಬರೀಶ್ ಕದ್ದಾಲಿಕೆ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್
author img

By

Published : Aug 14, 2019, 9:20 PM IST

ಮಂಡ್ಯ: ಪೋನ್ ಕದ್ದಾಲಿಕೆ ಕುರಿತು ಎರಡು ತಿಂಗಳ ಹಿಂದೆಯೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇ ಎಂದು ಸಂಸದೆ ಸುಮಲತಾ ಅಂಬರೀಶ್ ಕದ್ದಾಲಿಕೆ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಜನ ಸಂಪರ್ಕ ಸಭೆ, ಅಧಿಕಾರಿಗಳ ಸಭೆ ಮಾಡಿದ ನಂತರ ಮಾಜಿ ಸಿಎಂ ಕುಮಾರಸ್ವಾಮಿ ಆಡಳಿತದ ಅವಧಿಯಲ್ಲಿ ಪೋನ್ ಕದ್ದಾಲಿಕೆ ನಡೆದಿತ್ತು ಎಂಬ ಆರೋಪ ಕುರಿತು ಪ್ರತಿಕ್ರಿಯೆ ನೀಡಿದರು.ನನಗೆ ಅನುಮಾನ ಇತ್ತು‌. ಹಾಗಾಗಿ ದೂರು ನೀಡಿದ್ದೆ. ಆದರೆ ಈಗಿನ ಆರೋಪ ನನಗೆ ಗೊತ್ತಿಲ್ಲ. ಟಿವಿ ನೋಡುತ್ತಿಲ್ಲ ಎಂದು ಹೇಳಿದರು.

ಸಂಸದೆ ಸುಮಲತಾ ಅಂಬರೀಶ್
ಇನ್ನು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ. ಈಗಾಗಲೇ ಸಂಸತ್‌ನಲ್ಲಿ ಧ್ವನಿ ಎತ್ತಿದ್ದೇನೆ. ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿರುವೆ ಎಂದು ತಿಳಿಸಿದರು.

ಇನ್ನೂ ಒಂದು ವಾರಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದೇನೆ. ಜನರ ಸಂಕಷ್ಟ ಪರಿಹಾರಕ್ಕೆ ಪ್ರವಾಹ ಸ್ಥಳಕ್ಕೆ ಹೋಗಲಾಗುವುದು. ಅಕ್ರಮಗಳನ್ನು ತಡೆಯುವುದು ನನ್ನ ಕರ್ತವ್ಯ ಎಂದರು.ಇದಕ್ಕೂ ಮೊದಲು ಶ್ರೀರಂಗಪಟ್ಟಣ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಸಿದರು. ಹಲವು ಮಾಹಿತಿಗಳನ್ನು ಸಂಗ್ರಹಿಸಿ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದರು.

Intro:ಮಂಡ್ಯ: ಪೋನ್ ಕದ್ದಾಲಿಕೆ ಕುರಿತು ಎರಡು ತಿಂಗಳ ಹಿಂದೆಯೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇ ಅಂತ ಸಂಸದೆ ಸುಮಲತಾ ಅಂಬರೀಶ್ ಕದ್ದಾಲಿಕೆ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಜನ ಸಂಪರ್ಕ ಸಭೆ, ಅಧಿಕಾರಿಗಳ ಸಭೆ ಮಾಡಿದ ನಂತರ ಮಾಜಿ ಸಿಎಂ ಕುಮಾರಸ್ವಾಮಿ ಆಡಳಿತದ ಅವಧಿಯಲ್ಲಿ ಪೋನ್ ಕದ್ದಾಲಿಕೆ ನಡೆದಿತ್ತು ಎಂಬ ಆರೋಪ ಕುರಿತು ಪ್ರತಿಕ್ರಿಯೆ ನೀಡಿದರು.

Body:ನಮಗೆ ಅನುಮಾನ ಇತ್ತು‌. ಹಾಗಾಗಿ ದೂರು ನೀಡಿದ್ದೆ. ಆದರೆ ಈಗಿನ ಆರೋಪ ನನಗೆ ಗೊತ್ತಿಲ್ಲ. ಟಿವಿ ನೋಡುತ್ತಿಲ್ಲ ಎಂದು ಹೇಳಿದರು.
ಇನ್ನು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ. ಈಗಾಗಲೇ ಸಂಸತ್‌ನಲ್ಲಿ ಧ್ವನಿ ಎತ್ತಿದ್ದೇನೆ. ಸಬಂಧಪಟ್ಟ ಸಚಿವರ ಜೊತೆ ಮಾತನಾಡಿರುವೆ ಎಂದು ತಿಳಿಸಿದರು.
ಇನ್ನೂ ಒಂದು ವಾರಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದೇನೆ. ಜನರ ಸಂಕಷ್ಟ ಪರಿಹಾರಕ್ಕೆ ಸ್ಥಳಕ್ಕೆ ಹೋಗಲಾಗುವುದು. ಅಕ್ರಮಗಳನ್ನು ತಡೆಯುವುದು ನನ್ನ ಕರ್ತವ್ಯ ಎಂದರು.
ಇದಕ್ಕೂ ಮೊದಲು ಶ್ರೀರಂಗಪಟ್ಟಣ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಸಿದರು. ಹಲವು ಮಾಹಿತಿಗಳನ್ನು ಸಂಗ್ರಹಿಸಿ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದರು.

ಬೈಟ್: ಸುಮಲತಾ ಅಂಬರೀಶ್, ಸಂಸದೆ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.