ETV Bharat / state

ನಾನು ಬಿಜೆಪಿ ಸೇರುವುದರ ಬಗ್ಗೆ ಯೋಚಿಸಿಲ್ಲ: ಸಂಸದೆ ಸುಮಲತಾ ಅಂಬರೀಶ್​ - ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ

ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ಯೋಚನೆ ಮಾಡಿಲ್ಲ - ಬಿಜೆಪಿ ನಾಯಕರು ಸಹ ಈ ಬಗ್ಗೆ ಮಾತನಾಡಿರುವುದು ನಿಜ - ಆದರೆ ನಾನು ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ - ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ

Sumalatha Ambareesh
ಸಂಸದೆ ಸುಮಲತಾ ಅಂಬರೀಶ್​
author img

By

Published : Jan 6, 2023, 3:47 PM IST

ಬಿಜೆಪಿ ಸೇರ್ಪಡೆ ವಿಚಾರ : ಸುಮಲತಾ ಅಂಬರೀಶ್ ಪ್ರತಿಕ್ರಿಯೆ

ಮಂಡ್ಯ: ಬಿಜೆಪಿ ನಾಯಕರು ನನ್ನನ್ನು ಸಂಪರ್ಕಿಸಿರುವುದು ನಿಜ. ಆದರೆ, ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ಯೋಚನೆ ಮಾಡಿಲ್ಲ. ಬಿಜೆಪಿ ನಾಯಕರು ಸಹ ಈ ಬಗ್ಗೆ ಮಾತನಾಡಿದ್ದಾರೆ. ನಾನು ಈ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆ ವಿಚಾರ ಇಲ್ಲ. ಫ್ಲೆಕ್ಸ್​​ನಲ್ಲಿ ಅವರವರ ಅಭಿಮಾನಕ್ಕೆ ಫೋಟೋ ಹಾಕಿದ್ದಾರೆ ಅಷ್ಟೇ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಸಚ್ಚಿದಾನಂದ ಅವರಿಗೆ ನನ್ನ ಬೆಂಬಲ ಇದೆ ಎನ್ನುವುದರಲ್ಲ ಎರಡು ಮಾತಿಲ್ಲ ಮತ್ತು ಆ ವಿಚಾರದಲ್ಲಿ ಮುಚ್ಚಿಡುವಂತಹದ್ದೇನೂ ಇಲ್ಲೂ. ಸಚ್ಚಿದಾನಂದಗೆ ನನ್ನ ಬೆಂಬಲ ಇದೆ ಎಂದು ಓಪನ್ ಆಗಿ ಘೋಷಣೆ ಮಾಡಿದ್ದೇನೆ. ಹೀಗಾಗಿ ಸಚ್ಚಿ ಬ್ಯಾನರ್​​ನಲ್ಲಿ ನನ್ನ ಫೋಟೋ ಹಾಕಿಕೊಂಡಿದ್ದಾರೆ. ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಿಕೊಂಡರೆ ನಾನು ಏನು ಮಾಡೋಕೆ ಆಗಲ್ಲ ಎಂದು ಇದೇ ವೇಳೆ ಸಂಸದೆ ಹೇಳಿದರು.

ಪಕ್ಷ ಸೇರ್ಪಡೆಯ ಬಗ್ಗೆ ನಾನು ಯಾವುದೇ ಸಭೆ ಮಾಡುತ್ತಿಲ್ಲ. ನಾನು ಹೋದ ಕಡೆ ಜನರನ್ನು ಪಕ್ಷ ಸೇರ್ಪಡೆ ಬಗ್ಗೆ ಕೇಳುತ್ತಾ ಇದ್ದೀನಿ. ಜನರು ಸಹ ಈ ಬಗ್ಗೆ ಕೇಳ್ತಾ ಇದ್ದಾರೆ. ಜನರು ಸಹ ಸದ್ಯಕ್ಕೆ ಹೀಗೆ ಇರಿ ಎಂದು ಹೇಳುತ್ತಿದ್ದಾರೆ. ನಾನು ಯಾವುದೇ ನಿರ್ಧಾರ ಮಾಡಲ್ಲ. ಜನರು ಪಕ್ಷ ಸೇರ್ಪಡೆ ಬಗ್ಗೆ ನಿರ್ಧಾರ ಮಾಡ್ತಾರೆ. ಪಕ್ಷಕ್ಕೆ ಸೇರುವ ಪರಿಸ್ಥಿತಿ ಬಂದಾಗ ಹೇಗೆ ಮಾಡಬೇಕೆಂದು ಯೋಚನೆ ಮಾಡುತ್ತೇನೆ. ಯೋಗೇಶ್ವರ್ ಅವರಿಗೆ ಬಿಜೆಪಿಗೆ ನಾನು ಬರಬೇಕು ಎಂಬ ಆಸೆ ಇದೆ. ಅದೇ ರೀತಿ ಹಲವು ನಾಯಕರು ನನ್ನನ್ನು ಮಾತನಾಡಿಸಿದ್ದಾರೆ. ಇಲ್ಲಿಯವರೆಗೆ ನಾನು ಆ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸುಮಲತಾ ಅಂಬರೀಶ್ ಮತ್ತೆ ಮತ್ತೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮಂಡ್ಯದಲ್ಲಿ ಆಪರೇಷನ್ ಕಮಲ: ಸುಮಲತಾ ಆಪ್ತ ಸಚ್ಚಿದಾನಂದ ಸೇರಿ ಹಲವರು ಬಿಜೆಪಿಗೆ ಸೇರ್ಪಡೆ

ಚುನಾವಣಾ ಪೂರ್ವದಲ್ಲೇ ಆಪರೇಷನ್ ಕಮಲ ಆರಂಭಿಸಿರುವ ಬಿಜೆಪಿ ನಾಯಕರು ಸತತ ಪ್ರಯತ್ನದ ಬಳಿಕ ಅಂತಿಮವಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಸೇರಿ ಮಂಡ್ಯದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಸುಮಲತಾ ಅವರನ್ನು ಸೇರಿಸಿಕೊಳ್ಳುವ ಮೊದಲಿನ ಭಾಗವಾಗಿ ಈ ಆಪರೇಷನ್ ನಡೆದಿದೆ ಎನ್ನಲಾಗುತ್ತಿದೆ.

ಕೆಲ ದಿನಗಳ ಹಿಂದೆ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ, ನಾಗಮಂಗಲದ ರವಿ, ಶ್ರೀರಂಗಪಟ್ಟಣದ ಲಿಂಗರಾಜು ಬಿಜೆಪಿ ಸೇರ್ಪಡೆಯಾಗಿದ್ದರು . ಪಕ್ಷದ ಭಾವುಟ ಮತ್ತು ಶಾಲು ಹೊದಿಸಿ ಸಚಿವ ಅಶ್ವತ್ಥ ನಾರಾಯಣ್, ಕೆ.ಗೋಪಾಲಯ್ಯ, ನಾರಾಯಣ ಗೌಡರು, ಸಿಪಿ ಯೋಗೇಶ್ವರ್​, ನಿರ್ಮಲ್ ಕುಮಾರ್ ಸುರಾನ, ಶಾಸಕ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ ಅವರು ಮಂಡ್ಯ ನಾಯಕರಿಗೆ ಸ್ವಾಗತ ಕೋರಿ ಪಕ್ಷಕ್ಕೆ ಬರಮಾಡಿಕೊಂಡಿದ್ದರು.

ಇದನ್ನೂ ಓದಿ: ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಇನ್ನಷ್ಟು ಬಲ: ಸಿಎಂ ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.