ETV Bharat / state

ಕುಮಾರಸ್ವಾಮಿ ಭ್ರಷ್ಟಾಚಾರದ ಬಗ್ಗೆ ಆಣೆ ಮಾಡುವುದಾದರೆ ನಾವು ಸಿದ್ಧ: ಸಚಿವ ಎನ್ ಚಲುವರಾಯಸ್ವಾಮಿ

ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಇಲ್ಲ. ​ ಸರ್ಕಾರದಲ್ಲಿ 50 ಮಂದಿ ಸಿಎಂ ಆಗುವ ಅರ್ಹತೆ ಹೊಂದಿದ್ದಾರೆ ಎಂದು ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

Minister N Cheluvarayaswamy spoke to the media.
ಸಚಿವ ಎನ್ ಚಲುವರಾಯಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದರು.
author img

By ETV Bharat Karnataka Team

Published : Oct 28, 2023, 8:13 PM IST

ಸಚಿವ ಎನ್ ಚಲುವರಾಯಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಂಡ್ಯ: ಜಾತ್ಯತೀತ ಜನತಾದಳದ ಶಾಸಕಾಂಗ ನಾಯಕ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ 14 ತಿಂಗಳ ಆಡಳಿತದ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ಮಾಡಿಲ್ಲವೆಂದು ಆಣೆ ಮಾಡುವುದಾದರೆ ಎಲ್ಲಿಗಾದರೂ ಬರಲಿ. ನಾವು ಬರಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಸವಾಲು ಹಾಕಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2018ರಲ್ಲಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ವರ್ಗಾವಣೆ ಸೇರಿ ಆಡಳಿತದಲ್ಲಿ ಭ್ರಷ್ಟಾಚಾರ ಮಾಡಿಲ್ಲ ಎಂಬ ಬಗ್ಗೆ ಆಣೆ ಮಾಡುವುದಾದರೆ ಧರ್ಮಸ್ಥಳ ಸೇರಿದಂತೆ ಯಾವುದೇ ದೇವಾಲಯಕ್ಕೆ ಬಂದು ಪ್ರಮಾಣ ಮಾಡಿದರೂ, ನಾವು ಸಿದ್ಧರಿದ್ದೇವೆ, ಅವರು ಬರುತ್ತಾರಾ ? ಎಂದು ಪ್ರಶ್ನಿಸಿದರು.

ಭ್ರಷ್ಟಾಚಾರದ ಆಪಾದನೆ: ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಷ್ಟಾಚಾರದ ಆಪಾದನೆ ಮಾಡಿ ಆಣೆ ಪ್ರಮಾಣಕ್ಕೆ ಸವಾಲು ಹಾಕುತ್ತಾರೆ. ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿನ ಬಗ್ಗೆ ಹಳೆಯದೆಲ್ಲ ಬೇಡ ಎನ್ನುತ್ತಾರೆ. ಅದನ್ನೆಲ್ಲ ಬಿಟ್ಟು ಬಿಡುತ್ತೇವೆ. 14 ತಿಂಗಳ ಆಡಳಿತ ಅವಧಿ ಬಗ್ಗೆ ಪ್ರಮಾಣ ಮಾಡಲಿ ಎಂದು ಒತ್ತಾಯಿಸಿದರು.

ಪಕ್ಷದಲ್ಲಿ 50 ಮಂದಿಗೆ ಸಿಎಂ ಆಗುವ ಅರ್ಹತೆ: ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಸರ್ಕಾರ ಸಮರ್ಥವಾಗಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ 50 ಮಂದಿಗೆ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ. ಇದೆಲ್ಲವನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿ ನಿವಾರಣೆಗೆ ಅನುದಾನ ಕೋರಿದ್ದೇವೆ, ಎರಡು ಮೂರು ದಿನ ಕಾಯೋಣ, ಕೇಂದ್ರ ಸ್ಪಂದಿಸಲಿದೆ ಎಂಬ ನಂಬಿಕೆ ಇದೆ, ಈ ಬಗ್ಗೆ ಅನುಮಾನ ಬೇಡ ಎಂದು ತಿಳಿಸಿದರು.

ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ಶಾಸಕರಿಗೆ ಒಪ್ಪಿಗೆ ಇಲ್ಲ: ಆಪರೇಷನ್ ಹಸ್ತದ ಅವಶ್ಯಕತೆ ನಮಗೆ ಇಲ್ಲ, ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಈ ಬಗ್ಗೆ ಆ ಪಕ್ಷಗಳ ನಾಯಕರು, ಶಾಸಕರಿಗೆ ಒಪ್ಪಿಗೆ ಇಲ್ಲ, ಹೊಂದಾಣಿಕೆ ಆಗಿಲ್ಲ, ಗೊಂದಲದ ಪರಿಸ್ಥಿತಿ ಇದೆ. ಹಾಗಾಗಿ ಆಪರೇಷನ್ ಕಮಲದ ಗುಮ್ಮ ಬಿಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಮತದಾರರ ಒಲವು ಇದ್ದು, ಅದನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಇದಾಗಿದೆ ಎಂದರು.

ಚುನಾವಣೆ ಎದುರಾಗುತ್ತಿರುವ ಹಿನ್ನೆಲೆ ಪ್ರತಿಪಕ್ಷಗಳಿಗೆ ರಾಜಕೀಯ ಚರ್ಚೆ ಬೇಕಾಗಿದೆ. ರಾಜ್ಯ ಸರ್ಕಾರ ನಾಲ್ಕೂವರೆ ತಿಂಗಳಲ್ಲಿ ಅಭಿವೃದ್ಧಿ ಕೆಲಸದ ಜೊತೆಗೆ ಅನುದಾನ ಬಿಡುಗಡೆ ಮಾಡಿದೆ. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದೆ. ಕಾವೇರಿ ಸಮಸ್ಯೆಯನ್ನು ಸೂಕ್ಷ್ಮವಾಗಿ ಪರಿಗಣಿಸಿದೆ. ಎಲ್ಲವೂ ಅಚ್ಚುಕಟ್ಟಾಗಿ ನಡೆಯುತ್ತಿದ್ದು, ಇದನ್ನು ಸಹಿಸಲು ಪ್ರತಿಪಕ್ಷಗಳಿಗೆ ಆಗುತ್ತಿಲ್ಲ. ಹೀಗಾಗಿ ಇಲ್ಲಸಲ್ಲದ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಇದನ್ನೂಓದಿ:ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗುವುದರಲ್ಲಿ ತಪ್ಪೇನು? ಅವರು ಯೂತ್ ಐಕಾನ್: ವಿಜಯೇಂದ್ರ ಪರ ರೇಣುಕಾಚಾರ್ಯ ಬ್ಯಾಟಿಂಗ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.