ಮಂಡ್ಯ: ನಿಖಿಲ್ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿಯಾಗ್ತಾರೆ ಎಂದು ಜೆಡಿಎಸ್ ಎಂಎಲ್‌ಸಿ ಅಪ್ಪಾಜಿಗೌಡ ಭವಿಷ್ಯ ನುಡಿದಿದ್ದಾರೆ.
ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಕುಮಾರಸ್ವಾಮಿ ಕೂಡ 1996 ರಲ್ಲಿ ಗೆದ್ದು ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ್ರು. ಅದೇ ರೀತಿ ನಿಖಿಲ್ ರನ್ನು ಕೂಡ ಈ ಬಾರಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದರು.
ಕುಮಾರಸ್ವಾಮಿ ಲೋಕಸಭೆಗೆ ಹೋದ ನಂತರ ಮುಖ್ಯಮಂತ್ರಿಯಾಗಿದ್ದಾರೆ. ಅದೇ ರೀತಿ ನಿಖಿಲ್ ಕೂಡ ಈ ರಾಜ್ಯದ ಮುಖ್ಯಮಂತ್ರಿಯಾಗ್ತಾರೆ. ಅಭಿವೃದ್ಧಿಗಾಗಿ ನಿಖಿಲ್ ಗೆಲ್ಲಿಸಿ ಎಂದು ಅಪ್ಪಾಜಿಗೌಡ ಮತ ಬೇಟೆ ನಡೆಸಿದರು.