ETV Bharat / state

ಅಕ್ರಮ ಕಲ್ಲುಗಣಿಗಾರಿಕೆಯಲ್ಲಿ ಕೆಲ ಅಧಿಕಾರಿಗಳು ಶಾಮೀಲು: ಸಚಿವ ನಾರಾಯಣ ಗೌಡ - Minister Narayana Gowda outrage about stone mining in Baby Hill

ಕೆ.ಆರ್.ಎಸ್. ಡ್ಯಾಂ ಸುತ್ತ ಗಣಿಗಾರಿಕೆ ನಡೆಯುತ್ತಿದೆ. ಅಲ್ಲಿ ಸ್ಫೋಟ ಮಾಡಿದಾಗ ಸುತ್ತಲ ಪ್ರದೇಶದ ಜನರಿಗೆ ಗೊತ್ತಾಗುತ್ತೆ. ಆದರೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ಇದು ಬೇಲಿಯೇ ಎದ್ದು ಹೊಲ ಮೇಯ್ದ ರೀತಿ ಎಂದು ಸಚಿವ ನಾರಾಯಣಗೌಡ ಗರಂ ಆದರು.

minister narayanagowda meeting with officials about mining
ಕಲ್ಲು ಗಣಿಗಾರಿಕೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ನಾರಾಯಣಗೌಡ
author img

By

Published : Jul 12, 2021, 7:04 PM IST

ಮಂಡ್ಯ: ಗಣಿಗಾರಿಕೆ ನಡೆಸುವ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ ಕೊಡುವುದೇ ಇಲ್ಲ‌. ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಕಲ್ಲು ತೆಗೆಯುತ್ತಿದ್ದಾರೆ ಎನ್ನುವ ಮಾಹಿತಿಯೇ ಅವರಲ್ಲಿಲ್ಲ. ಕೆಲ ಅಧಿಕಾರಿಗಳು ಶಾಮೀಲಾಗಿ ಹಾಗೂ ನಿರ್ಲಕ್ಷ್ಯದಿಂದಲೇ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ ಎಂದು ಸಚಿವ ನಾರಾಯಣಗೌಡ ಆರೋಪಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲ್ಲು ಗಣಿಗಾರಿಕೆ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಕೆ.ಆರ್.ಎಸ್. ಡ್ಯಾಂ ಸುತ್ತ ಗಣಿಗಾರಿಕೆ ಇದೆ. ಅಲ್ಲಿ ಬ್ಲಾಸ್ಟ್ ಮಾಡಿದಾಗ ಸುತ್ತಲ ಪ್ರದೇಶದ ಜನರಿಗೆ ಗೊತ್ತಾಗುತ್ತೆ. ಆದರೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ಇದು ಬೇಲಿಯೇ ಎದ್ದು ಹೊಲ ಮೇಯ್ದ ರೀತಿ ಎಂದರು.

ರಾಜಧನ ಸಂಗ್ರಹಕ್ಕೆ ಸೂಚನೆ: ಇನ್ನು ಮುಂದೆ ಕಡ್ಡಾಯವಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಬೇಕು. ಸರಿಯಾಗಿ ರಾಜಧನ ಸಂಗ್ರಹ ಮಾಡಬೇಕು ಎಂದು ಸೂಚಿಸಿದ ಸಚಿವ ನಾರಾಯಣಗೌಡ, ನಮ್ಮ ಜಿಲ್ಲೆಯಲ್ಲಿ 95 ಕ್ಕೂ ಹೆಚ್ಚು ಕಲ್ಲುಗಣಿಗಾರಿಕೆ ಇದೆ. ಬೇರೆ ಜಿಲ್ಲೆಗಳಲ್ಲಿ ಇದಕ್ಕಿಂತ ಕಡಿಮೆ ಇದೆ. ಅಲ್ಲಿ ಸಾವಿರಾರು ಕೋಟಿ ರಾಜಧನ ಸಂಗ್ರಹವಾಗುತ್ತಿದೆ. ಆದರೆ ಮಂಡ್ಯ ಜಿಲ್ಲೆಯಲ್ಲಿ ಸರಿಯಾಗಿ ರಾಯಲ್ಟಿ ಸಂಗ್ರಹವಾಗುತ್ತಿಲ್ಲ. ಹೀಗಾಗಿ ಅಧಿಕಾರಿಗಳು ತಕ್ಷಣ ಎಲ್ಲ ಲೋಪ ದೋಷ ಸರಿಪಡಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.

ಅಕ್ರಮ ತಡೆಗೆ ಸಹಾಯವಾಣಿ ಆರಂಭ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಯಬೇಕು. ಅದಕ್ಕಾಗಿ ಅಧಿಕಾರಿಗಳು ಶಿಸ್ತಿನಿಂದ ಕೆಲಸ ಮಾಡಬೇಕು. ಜೊತೆಗೆ ಜನಸಾಮಾನ್ಯರ ನೆರವಿನಿಂದ ಕ್ರಮವಹಿಸುವಂತೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಸಹಾಯವಾಣಿ ತೆರೆಯುವುದರಿಂದ ಜನರು ಆ ಕ್ಷಣವೇ ಮಾಹಿತಿ ನೀಡುತ್ತಾರೆ. ಇದರಿಂದ ಅಕ್ರಮ ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಸಹಾಯವಾಣಿ ಕೇಂದ್ರ ತೆರೆದು ಜನಸಾಮಾನ್ಯರಿಗೆ ಆ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಟಾಸ್ಕ್ ಪೋರ್ಸ್ ರಚಿಸಿ: ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ಆರ್​ಟಿಓ ಕಂದಾಯ, ಪಂಚಾಯತ್​​ರಾಜ್​ ಇಲಾಖೆ ಹಾಗೂ ಅರಣ್ಯ ಇಲಾಖೆ ಒಳಗೊಂಡ ಟಾಸ್ಕ್ ಪೋರ್ಸ್ ರಚನೆಗೆ ಆಗ್ರಹಿಸಿ, ತಕ್ಷಣವೇ ಗಣಿಗಾರಿಕೆ ಪ್ರದೇಶವನ್ನು ಸರ್ವೆ ನಡೆಸಿ ವರದಿ ನೀಡಬೇಕು. ಎಲ್ಲ ಕಡೆ ತಪಾಸಣಾ ಕೇಂದ್ರ ಸ್ಥಾಪಿಸಬೇಕು ಮತ್ತು ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಪಟ್ಟಿಯನ್ನು ತಕ್ಷಣ ನೀಡಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಪಿಎಸ್ ಅಳವಡಿಸಿ: ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಬರಬೇಕಾದ ಕೋಟಿ ಕೋಟಿ ರೂ. ಆದಾಯ ನಷ್ಟವಾಗುತ್ತಿದೆ. ತಪಾಸಣಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಆಗಬೇಕು. ಕಲ್ಲು ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕು. ಈ ಬಗ್ಗೆ ಅಧಿಕಾರಿಗಳು ಪ್ರತಿದಿನ ನಿಗಾ ಇಡಬೇಕು ಎಂದರು‌.

ಬೇಬಿ ಬೆಟ್ಟ ಗಣಿಗಾರಿಕೆ ಸ್ಥಗಿತಕ್ಕೆ ಸಿಎಂ ಜತೆ ಚರ್ಚೆ: ಕೆಆರ್​ಎಸ್ ಡ್ಯಾಂ ಸುರಕ್ಷತೆಗೆ ಬೇಬಿ ಬೆಟ್ಟದ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಮುಖ್ಯಮಂತ್ರಿಗಳ ಜೊತೆಯು ಚರ್ಚೆ ನಡೆಸುತ್ತೇನೆ ಎಂದ ಅವರು, ಕನ್ನಂಬಾಡಿ ಅಣೆಕಟ್ಟಿನ ವಿಚಾರ ಸದ್ಯ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗಣಿ ಪ್ರದೇಶದಲ್ಲಿ ಬ್ಲಾಸ್ಟ್ ಮಾಡುವುದರಿಂದ ಡ್ಯಾಂ ಗೆ ಡ್ಯಾಮೇಜ್ ಆಗುತ್ತೆ ಎಂಬ ಕೂಗು ಬಹಳ ದಿನಗಳಿಂದ ಇದೆ. ಹೀಗಾಗಿ ಡ್ಯಾಂ ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆಯನ್ನೇ ಸ್ಥಗಿತಮಾಡುವುದು ಉತ್ತಮ ಎಂದರು.

ಬೇಬಿ ಬೆಟ್ಟದಲ್ಲಿ ಪ್ರವಾಸೋದ್ಯಮಕ್ಕೆ ಪ್ಲಾನ್: ದೇಶದ ಬೇರೆ ಬೇರೆ ಅಣೆಕಟ್ಟು ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಿಲ್ಲಿಸಿರುವ ಉದಾಹರಣೆ ಇದೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲೂ ಕ್ರಮ ತೆಗೆದುಕೊಳ್ಳುವುದು ಉತ್ತಮ. ಅಗತ್ಯವಿದ್ದಲ್ಲಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸುವವರಿಗೆ ಪರ್ಯಾಯ ಸ್ಥಳ ಗುರುತಿಸಿ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳೋಣ ಎಂದರಲ್ಲದೇ ಬೇಬಿ ಬೆಟ್ಟದಲ್ಲಿ ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ಯೋಜನೆ ರೂಪಿಸಿ ಎಂದು ಹೇಳಿದರು.

ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಭೂಮಿಪೂಜೆ ಮಾಡಿದ್ರೆ ನಾವು ಸರ್ಕಾರದ ಜತೆ ನಿಲ್ತೇವೆ: ಡಿ.ಕೆ.ಶಿವಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.