ಮಂಡ್ಯ: ಸುಮಾರು 3 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಕ್ಷೇತದ ಪಾಲಹಳ್ಳಿ - ಕಾರೇಕುರ ರಸ್ತೆ ಅಭಿವೃದ್ಧಿ, ಲಕ್ಷ್ಮೀಪುರ - ನಗುನಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.
ಕಾಮಗಾರಿ ಗುದ್ದಲಿ ಪೂಜೆ ನಂತರ ಮಾತನಾಡಿ, ಕೋವಿಡ್ ವಿಚಾರದಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಜನಪ್ರತಿನಿಧಿಗಳ ಸಭೆ ಕರೆಯಿರಿ ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರೂ ಸಭೆ ಮಾಡಲು ಮುಂದಾಗಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇನೆ ಎಂದರು.
ಕೊರೊನಾ ವಿಚಾರವಾಗಲಿ, ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಯಾವುದೇ ಸಹಕಾರ ನೀಡುತ್ತಿಲ್ಲ. ಸಿಎಂಗೆ ಮನವಿ ಮಾಡುತ್ತೇನೆ, ತಡೆ ಹಿಡಿದಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿ ಎಂದರು.
ಕೋಟೆ ರಕ್ಷಣೆಗೆ ಸೂಚನೆ : ಶ್ರೀರಂಗಪಟ್ಟಣ ಕೋಟೆಯ ಕಂದಕ ಮುಚ್ಚಲಾಗುತ್ತಿದೆ. ಗೋಡೆಗಳ ರಕ್ಷಣೆ ಮಾಡಲಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುವೆ. ಪ್ರಾಚ್ಯವಸ್ತು ಇಲಾಖೆಯ ಅಧಿಕಾರಿಗಳ ಸಭೆ ಮಾಡಿ ಎಚ್ಚರಿಕೆ ನೀಡಲಾಗುವುದು ಎಂದರು.