ETV Bharat / state

ಕೆಆರ್‌ಎಸ್‌ನಲ್ಲಿ ಒಳಹರಿವು ಹೆಚ್ಚಳ ಹಿನ್ನೆಲೆ: 30 ಸಾವಿರ ಕ್ಯೂಸೆಕ್​ ನೀರು ಬಿಡುಗಡೆ - mandya news

ಕೆಆರ್‌ಎಸ್ ಅಣೆಕಟ್ಟೆಯ ಒಳ ಹರಿವಿನ ಪ್ರಮಾಣ 55 ಸಾವಿರ ತಲುಪಿದ್ದು, ರಾತ್ರಿ ವೇಳೆಗೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅಣೆಕಟ್ಟೆಯ ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಹರಿಸಲಾಗುತ್ತಿದೆ.

ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ
ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ
author img

By

Published : Aug 7, 2020, 8:47 PM IST

ಮಂಡ್ಯ: ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಅಣೆಕಟ್ಟೆಯಿಂದ 30 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.

ಅಣೆಕಟ್ಟೆಗೆ ಒಳ ಹರಿವಿನ ಪ್ರಮಾಣ 55 ಸಾವಿರ ತಲುಪಿದ್ದು, ರಾತ್ರಿ ವೇಳೆಗೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅಣೆಕಟ್ಟೆಯ ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಹರಿಸಲಾಗುತ್ತಿದೆ.

ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ ನದಿಗೆ ನೀರು ಬಿಡುಗಡೆ

ಸದ್ಯ ಅಣೆಕಟ್ಟೆ 115.90 ಅಡಿ ತುಂಬಿದೆ. ಗರಿಷ್ಠ ಪ್ರಮಾಣ 124.80 ಅಡಿ ಇದ್ದು, 38.08 ಟಿಎಂಸಿ ನೀರು ಸಂಗ್ರಹ ಹೊಂದಿದೆ. ಗರಿಷ್ಠ ಸಾಮಾರ್ಥ್ಯ 49 ಟಿಎಂಸಿಯಾಗಿದೆ.

ರಂಗನತಿಟ್ಟು ಪ್ರವೇಶ ನಿಷೇಧ: ನದಿಗೆ ನೀರು ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ರಂಗನತಿಟ್ಟು ಪಕ್ಷಿ ಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಶ್ರೀರಂಗಪಟ್ಟಣದ ಸಂಗಮ್‌ನಲ್ಲೂ ಪ್ರವಾಸಿಗರು ನದಿಗೆ ಇಳಿಯುವುದಕ್ಕೆ ನಿಷೇಧಿಸಲಾಗಿದೆ. ನದಿ ಪಾತ್ರದ ಹೋಟೆಲ್ ಮಾಲೀಕರಿಗೂ ಎಚ್ಚರಿಕೆ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.