ಮಂಡ್ಯ: ಕೊಡಗಿನಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಕೆಆರ್ಎಸ್ ಒಳ ಹರಿವಿನಲ್ಲಿ ಮತ್ತೆ ಹೆಚ್ಚಳವಾಗಿದ್ದು, ಅಣೆಕಟ್ಟೆಯಿಂದ 43 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಪ್ರವಾಸಿ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.
ಮಳೆಯಿಂದಾಗಿ ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, 43,597 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. 28,359 ಕ್ಯೂಸೆಕ್ ಒಳ ಹರಿವುವಿದ್ದು, ಒಳ ಹರಿವು ಹೆಚ್ಚಾದಂತೆ ಹೊರ ಹರಿವಿನಲ್ಲೂ ಹೆಚ್ಚಳವಾಗುವ ಸಾಧ್ಯತೆ ಇದೆ. ಡ್ಯಾಂ ಭರ್ತಿಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ.
ಸದ್ಯ, ಅಣೆಕಟ್ಟೆಯ ನೀರಿನ ಮಟ್ಟ ಗರಿಷ್ಠ 124.80 ಅಡಿಯಿದ್ದು, ಇಂದಿನ ಮಟ್ಟ 124.80 ಅಡಿ ಇದೆ. ಒಳ ಹರಿವು 28,359 ಕ್ಯೂಸೆಕ್ ಇದ್ದು, ಹೊರ ಹರಿವು 43,597 ಕ್ಯೂಸೆಕ್ ಇದೆ.