ಮಂಡ್ಯ: ಕೈಗಾರಿಕಾ ವಲಯದ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಬಿಡಬೇಕು ಎಂಬ ನಿಯಮವಿದೆ. ಆದರೆ ಇಲ್ಲಿ ಯಾವುದೇ ಕಾನೂನು ಪಾಲನೆಯಾಗುತ್ತಿಲ್ಲ. ಕಾರ್ಖಾನೆಯ ತ್ಯಾಜ್ಯ ನೀರು ನಾಲೆಗೆ ಸೇರುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ವಲಯದಲ್ಲಿ ಸಂಸ್ಕರಣೆ ಮಾಡದ ತ್ಯಾಜ್ಯ ನೀರನ್ನು ವಿಶ್ವೇಶ್ವರಯ್ಯ ನಾಲೆಗೆ ಹರಿದು ಬಿಡಲಾಗುತ್ತಿದೆ. ಆದರೂ ಕೂಡ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇದರಿಂದ ಆಕ್ರೋಶಗೊಂಡಿರುವ ರೈತರು, ಅಧಿಕಾರಿಗಳು ಹಾಗೂ ಕಾರ್ಖಾನೆಯ ವಿರುದ್ಧ ದೂರು ದಾಖಲಿಸಲು ನಿರ್ಧಾರ ಮಾಡಿದ್ದಾರೆ.
ನಾಲೆಯ ನೀರು ಜಮೀನು ಹಾಗೂ ಜಾನುವಾರುಗಳಿಗೆ ಕುಡಿಯಲು ಬಳಕೆಯಾಗುತ್ತಿದ್ದು, ಈಗ ಕಲುಷಿತ ನೀರು ರೋಗಕ್ಕೆ ಕಾರಣವಾಗಿದೆ. ಎಷ್ಟೇ ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಳ್ತಿಲ್ಲ ಅಂತಾ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.