ಮಂಡ್ಯ: ಜೂನ್ 7 ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಸುವುದು ಸೂಕ್ತ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಕಂದಾಯ ಸಚಿವ ಅಶೋಕ್ ತಿಳಿಸಿದ್ದಾರೆ.
ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವು ರಾಜ್ಯಗಳು ಲಾಕ್ ಡೌನ್ ವಿಸ್ತರಿಸಿವೆ. ಪ್ರತಿ ನಿತ್ಯ ಪಾಸಿಟಿವ್ ಕೇಸ್ 3 ಸಾವಿರಕ್ಕೆ ಇಳಿಯುವರೆಗೆ ಲಾಕ್‌ಡೌನ್ ವಿಸ್ತರಿಸೋದು ಸೂಕ್ತ. ಈ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಂತಿಮವಾಗಿ ಜನರ ಹಿತದೃಷ್ಟಿಯಿಂದ ಸಿಎಂ ಇದರ ಬಗ್ಗೆ ನಿರ್ಧಾರ ಪ್ರಕಟಿಸುತ್ತಾರೆ. ಆದ್ರೆ ನನ್ನ ಪ್ರಕಾರ ಲಾಕ್ ಡೌನ್ ವಿಸ್ತರಣೆ ಮಾಡೋದು ಸೂಕ್ತ, ಈಗ ಸಡಿಲಿಕೆ ಮಾಡಿ ಮತ್ತೆ ಸೋಂಕು ಹೆಚ್ಚಾದರೆ ಮತ್ತೆ ಮೊದಲಿಂದ ಬರಬೇಕಾಗುತ್ತದೆ. ಹೀಗಾಗಿ ಈಗಲೇ ಎಚ್ಚೆತ್ತುಕೊಳ್ಳೋದು ಸೂಕ್ತ ಎಂದು ಸಲಹೆ ನೀಡಿದರು.
ಜೂನ್ 7ರ ನಂತರವೂ ಲಾಕ್‌ಡೌನ್ ಮುಂದುವರಿಸುವುದು ಸೂಕ್ತ: ಸಚಿವ ಆರ್. ಅಶೋಕ್ - Mandya news
ಕೆಲವು ಸಚಿವರು ಲಾಕ್ ಡೌನ್ ವಿಸ್ತರಣೆ ಮಾಡೋದು ಬೇಡ ಅನ್ನೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲರಿಗೂ ಅವರ ಅಭಿಪ್ರಾಯ ಹೇಳಿಕೊಳ್ಳಲು ಅವಕಾಶ ಇದೆ. ಆದರೆ ಮುಖ್ಯಮಂತ್ರಿಗಳ ತೀರ್ಮಾನವೇ ಅಂತಿಮ ಎಂದು ಸಚಿವ ಅಸೋಕ್ ಹೇಳಿದ್ದಾರೆ.