ETV Bharat / state

ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಬೇಡ : ಹೆಚ್​​ಡಿಕೆ - bjp leadership change issue

ಯಡಿಯೂರಪ್ಪ ಬದಲಾವಣೆ ವಿಚಾರ ನನಗೆ ಸಂಬಂಧ ಪಟ್ಟಿದ್ದಲ್ಲ. ನಾನು ಸರ್ಕಾರಕ್ಕೆ ಒಳ್ಳೆಯ ಕೆಲಸ ಮಾಡಿ ಅಂತ ಸಲಹೆ ಕೊಟ್ಟಿದ್ದೆ. ಕೋವಿಡ್​​ ಭೀತಿಯ ಸಂದರ್ಭದಲ್ಲಿ ರಾಜಕೀಯ ಮಾಡಬಾರದು. ಸತ್ತ ಮನೆಯಲ್ಲಿ ರಾಜಕಾರಣ ಮಾಡೋದು ಬೇಡ. ನನಗೆ ಸಿಎಂ ಆಗೋಕೆ ಅತುರ ಇಲ್ಲಾ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

its-not-time-to-do-polities-kumarswamy-said
ಕುಮಾರಸ್ವಾಮಿ
author img

By

Published : Jul 22, 2021, 6:39 PM IST

Updated : Jul 22, 2021, 7:14 PM IST

ಮಂಡ್ಯ: ಕೊರಾದಿಂದ ರಾಜ್ಯದಲ್ಲಿ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ಈ ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಬೇಡ. ನನಗೆ ಸಿಎಂ ಆಗೋಕೆ ಅತುರ ಇಲ್ಲಾ. ಜನರ ಸಮಸ್ಯೆಗಳ ಬಗ್ಗೆ ಅರ್ಥ ಮಾಡಿಕೊಂಡಿದ್ದೇನೆ ಎಂದು ಬಿಜೆಪಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.

ಜಿಲ್ಲೆಯ ಮಳವಳ್ಳಿ ತಾಲೂಕಿನ ಸತ್ತೆಗಾಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರು ಸಂಕಷ್ಟದಲ್ಲಿದ್ದಾರೆ, 30 ಸಾವಿರಕ್ಕೂ ಹೆಚ್ಚು ಜನ ಕೋವಿಡ್​ಗೆ ಬಲಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜಕೀಯ ಬೆರೆಸಬಾರದು. ನಾನು ಸರ್ಕಾರಕ್ಕೆ ಒಳ್ಳೆಯ ಕೆಲಸ ಮಾಡಿ ಅಂತ ಸಲಹೆ ಕೊಟ್ಟಿದ್ದೆ. ಎಷ್ಟು ಸರಿಯಾಗಿ ಪಾಲಿಸದ್ರೋ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜಾತಿ ಹೆಸರಲ್ಲಿ ರಾಜಕಾರಣ ಮಾಡಲ್ಲ‌: ನನಗೆ ಜಾತಿ ಇಲ್ಲಾ, ನಾಡಿನ ಜನತೆ ನನ್ನನ್ನು ಜಾತಿಯಿಂದ ಗುರ್ತಿಸಿಲ್ಲಾ. ಜಾತಿ ಹೆಸರಲ್ಲಿ ಮತ ತಗೊಳ್ಳಕ್ಕೆ ಹೋಗಲ್ಲ, ನನಗೂ ಬೇರೆ ರಾಜಕಾರಣಿಗಳಿಗೂ ವ್ಯತ್ಯಾಸ ಇದೆ. ಆರೂವರೆ ಕೋಟಿ ಜನರು ನನ್ನ ಅಣ್ಣ-ತಮ್ಮಂದಿರು. ಜಾತಿ ಹೆಸರಿನಿಂದ ಪಕ್ಷ ಕಟ್ಟೋಕ್ಕೆ ಹೋಗಲ್ಲ ಎಂದರು.

ಐದು ಕಾರ್ಯಕ್ರಮದ ಬಗ್ಗೆ ಚರ್ಚೆ: ನಾಡಿನ ಜನ ಸಂಕಷ್ಟದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಐದು ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡ್ತಿದ್ದೇನೆ. ಕಾರ್ಯಕ್ರಮಗಳನ್ನ ತರಲು ಪ್ರಾದೇಶಿಕ ಪಕ್ಷ ಜೆಡಿಎಸ್​ಗೆ ಬೆಂಬಲಿಸಿ ಎಂದು ಮನವಿ ಮಾಡಿದರು. ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯವನ್ನ ಸರಿಪಡಿಸುವುದರ ಬಗ್ಗೆ ಸವಾಲು ಸ್ವೀಕರಿಸುತ್ತೇನೆ. ಇದನ್ನು ಜನರ ತೀರ್ಮಾನಕ್ಕೆ ಬಿಡ್ತೇನೆ ಎಂದು ಹೇಳಿದರು.

ಬಿಎಸ್‌ವೈ ರಾಜೀನಾಮೆ: ನನಗೆ ಸಂಬಂಧಿಸಿದ ವಿಷಯ ಅಲ್ಲ, ಅದು ಬಿಜೆಪಿ ಆಂತರಿಕ ವಿಚಾರ. ಅವರ ಪಕ್ಷದ ನಿರ್ಧಾರದಲ್ಲಿ ನಾನು ಮೂಗು ತೂರಿಸುವುದು ಶೋಭೆತರುವುದಿಲ್ಲ ಎಂದು ಬಿಎಸ್‌ವೈ ರಾಜಿನಾಮೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.

ಸಿಎಂ ಬದಲಾವಣೆ ಕುರಿತು ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

ಮಠಾಧೀಶರ ಬೆಂಬಲ ವಿಚಾರಕ್ಕೆ ಮಹತ್ವ ಕೊಡಲ್ಲ: ಬಿಎಸ್‌ವೈಗೆ ಮಠಾಧೀಶರ ಬೆಂಬಲ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರಕ್ಕೆ ನಾನು ಮಹತ್ವ ಕೊಡುವುದಿಲ್ಲ. ಒಬ್ಬೊಬ್ಬರಲ್ಲಿ ಒಂದೊಂದು ಭಾವನೆ ಇದೆ, ಅವರ ಭಾವನೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅದರ ಸರಿ ತಪ್ಪು ನಿರ್ಧಾರ ಜನರದ್ದು. ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಚಾರ 2ವರ್ಷಗಳಿಂದ ನಡೆಯುತ್ತಿದೆ ಎಂದು ತಿಳಿಸಿದರು.

ಸಮಯ ವ್ಯರ್ಥ ಮಾಡಬೇಡಿ: ಜನರು ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಇಂತಹ ವಿಷಯಗಳಿಗೆ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಆದಷ್ಟು ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಿ ಎಂದು ಬಿಜೆಪಿ ಹೈಕಮಾಂಡ್‌ಗೆ ಮಾಜಿ ಸಿಎಂ ಹೆಚ್​ಡಿಕೆ ಸಲಹೆ ನೀಡಿದರು.

ತರಾತುರಿಯಲ್ಲಿ ಸಾವಿರಾರು ಕೋಟಿಗಳ ಯೋಜನೆಗೆ ಅನುಮತಿ: ನಾಳಿದ್ದು ರಾಜೀನಾಮೆ ನೀಡ್ತಾರೆ ಎನ್ನುತ್ತಿದ್ದಾರೆ. ಅದೇನೋ ನನಗೆ ಗೊತ್ತಿಲ್ಲ. ಆದ್ರೆ ಸಿಎಂ ತರಾತುರಿಯಲ್ಲಿ ಸಾವಿರಾರು ಕೋಟಿಗಳ ಯೋಜನೆಗೆ ಅನುಮತಿ ನೀಡ್ತಿದ್ದಾರೆ. ನಿರಾವರಿ ಇಲಾಖೆಯ 4 ನಿಗಮಗಳಲ್ಲಿ 12ಸಾವಿರ ಕೋಟಿ ಯೋಜನೆಗೆ ಇವತ್ತಿನ ಸಭೆಯಲ್ಲಿ ಯಡಿಯೂರಪ್ಪ ಅನುಮತಿ ನೀಡ್ತಿದ್ದಾರೆ ಎಂದರು.

ಕಾವೇರಿ ನಿಗಮಕ್ಕೆ ಕೇವಲ 1ಸಾವಿರ ಕೋಟಿ: 12ಸಾವಿರ ಕೋಟಿ ರೂ. ಯೋಜನೆಯಲ್ಲಿ ಕಾವೇರಿ ನಿಗಮಕ್ಕೆ ಕೇವಲ 1ಸಾವಿರ ಕೋಟಿ ನೀಡುತ್ತಿದ್ದಾರೆ. ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಹಳೇ ಕರ್ನಾಟಕ ಭಾಗದಿಂದ ಹೋಗುತ್ತಿದೆ. ನನಗೆ ಹಳೇ ಕರ್ನಾಟಕ ಹೊಸ ಕರ್ನಾಟಕದ ಪ್ರಶ್ನೆ ಅಲ್ಲ. ಆ ಭಾಗಕ್ಕೆ ನೀಡುವ ಆದ್ಯತೆಯನ್ನ ಈ ಭಾಗಕ್ಕೂ ನೀಡಿ ಎಂದು ಮನವಿ ಮಾಡಿದರು‌.

ಜ‌ನ ನಿಮಗೇನು ದ್ರೋಹ ಮಾಡಿದ್ದಾರೆ..?: ಇಲ್ಲಿನ ಜ‌ನ ನಿಮಗೇನು ದ್ರೋಹ ಮಾಡಿದ್ದಾರೆ.? ಈ ಭಾಗಕ್ಕೆ 1ಸಾವಿರ ಕೋಟಿ ಆ ಭಾಗಕ್ಕೆ 11ಸಾವಿರ ಕೋಟಿ ಯೋಜನೆ ನೀಡಿದರೆ ನಿಜವಾಗಲೂ ಆ ಭಾಗದ ಜನರಿಗೆ ನೀರು ಕೊಡಲು ಯೋಜನೆ ರೂಪಿಸಿದ್ದೀರಾ.?. ಎಂದು ಹೆಚ್​ಡಿಕೆ ಪ್ರಶ್ನಿಸಿದರು.

ದುಡ್ಡು ಹೊಡೆಯುವ ಯೋಜನೆ : ದುಡ್ಡು ಹೊಡೆಯುವ ಯೋಜನೆ ನಿಮ್ಮದು. 2 ದಿನದಲ್ಲಿ ಸಿಎಂ‌ ಬದಲಾಗುವುದಾದರೆ ತರಾತುರಿಯಲ್ಲಿ 12ಸಾವಿರ ಕೋಟಿ ಯೋಜನೆ ಯಾಕೆ.? ಅವರಿಗೆ ದರದ್ ಏನಿದೆ, ಯಾವ ಕಾರಣಕ್ಕಾಗಿ ಈ ತೀರ್ಮಾನ.? ಈಗಲೂ ದುಡ್ಡು ಹೊಡೆಯಲಿಕ್ಕಾ, ರಾಜ್ಯದ ತೆರಿಗೆ ಹಣ ಲೂಟಿ ಮಾಡಲಿಕ್ಕಾ? ಎಂದು ಸಿಎಂ ಬಿಎಸ್‌ವೈ‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದಕ್ಕೂ ಮುನ್ನ ಕಾವೇರಿ ನದಿಯಿಂದ ರಾಮನಗರ ಜಿಲ್ಲೆಗೆ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ಸ್ಥಳೀಯ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಡಾ.ಕೆ.ಅನ್ನದಾನಿ, ಡಿಸಿ ತಮ್ಮಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.

Last Updated : Jul 22, 2021, 7:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.