ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಏಪ್ರಿಲ್ 19ರಂದು ಆಯೋಜಿಸಿದ್ದ ಜನಸ್ಪಂದನ ಸಭೆಯನ್ನು ಕೋವಿಡ್ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎಂ.ವಿ.ರೂಪ ರದ್ದುಗೊಳಿಸಿದ್ದರು. ಈಗ ಜಿಲ್ಲಾಧಿಕಾರಿ ಅನುಮತಿ ಪಡೆದು ಈ ಸಭೆ ನಡೆಸಲು ಶಾಸಕ ರವೀಂದ್ರ ಶ್ರೀಕಂಠಯ್ಯ ನಿರ್ಧರಿಸಿದ್ದಾರೆ.
ಈ ಕುರಿತು ಶನಿವಾರ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತು ಅಧಿಕಾರಿಗಳ ನಡುವೆ ಪರಸ್ಪರ ವಾಕ್ಸಮರ ನಡೆದಿತ್ತು. ವೇದಿಕೆಯಲ್ಲೇ ರವೀಂದ್ರ ಶ್ರೀಕಂಠಯ್ಯ ತಹಶೀಲ್ದಾರ್ ರೂಪ ಅವರ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದರು. ಜೊತೆಗೆ, ಸೋಮವಾರದಂದು ಜನಸ್ಪಂದನ ಕಾರ್ಯಕ್ರಮದಲ್ಲಿ ನಿಮ್ಮ ಮುಖವಾಡವನ್ನು ಬಯಲು ಮಡುವುದಾಗಿಯೂ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಜನಸ್ಪಂದನ ಕುತೂಹಲ ಕೆರಳಿಸಿದೆ.
ಸಭೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಟೋಕನ್ ಪಡೆದು ಸಭೆಗೆ ಆಗಮಿಸುವಂತೆ ತಿಳಿಸಲಾಗಿದೆ.
ಇದನ್ನೂ ಓದಿ: ನಿಷ್ಠೆ ಬಿಟ್ಟಿದ್ದರೆ ನಿಮಗಿಂತ ಮೊದಲೇ ನಾನು ಸಚಿವನಾಗುತ್ತಿದ್ದೆ : ಶಾಸಕ-ಸಚಿವರ ಮಧ್ಯೆ ವಾಕ್ಸಮರ