ಮಂಡ್ಯ: ಮಾಜಿ ಸಚಿವ ಚಲುವರಾಯಸ್ವಾಮಿ ಅವರಿಗೆ ವೈಯಕ್ತಿಕವಾಗಿ ಉಳಿಗಾಲವಿಲ್ಲ. ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲ. ಸೋತವರು ಮುಂದೆ ಬುದ್ಧಿ ಕಲಿಯುತ್ತಾರೆ ಎಂದು ಜೆಡಿಎಸ್ ಶಾಸಕ ಸುರೇಶ್ ಗೌಡ ಟಾಂಗ್ ನೀಡಿದ್ದಾರೆ.
ಮದ್ದೂರಿನಲ್ಲಿ ಮಾತನಾಡಿದ ಅವರು, ಇವರೇನು ಸೋತಿಲ್ವಾ ಎಂದು ಚಲುವರಾಯಸ್ವಾಮಿ ಕಾಲೆಳೆದರು.
ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡೋಕೆ ಇವರಿಗೆ ಯೋಗ್ಯತೆ ಇಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಪ್ರಧಾನಿಯಾಗೋಕೆ ಅವರ ವಿರೋಧವಿತ್ತು ಎಂದು ಹೊಸ ಬಾಂಬ್ ಸಿಡಿಸಿದರು.
ವಿಶ್ವನಾಥ್ ರಾಜೀನಾಮೆ ವಾಪಾಸ್ ಪಡೆಯುತ್ತಾರೆ. ಅವರ ಅಧ್ಯಕ್ಷತೆಯಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.