ಮಂಡ್ಯ : ರಾಜ್ಯದಲ್ಲಿ ಪಕ್ಷಾಂತರ ಪರ್ವದ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಮಂಡ್ಯ ಜಿಲ್ಲೆಯ ಇಬ್ಬರು ಹಾಲಿ ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಸಚ್ಚಾಗಿದ್ದಾರೆ ಎನ್ನಲಾಗ್ತಿದೆ.
ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಜೆಡಿಎಸ್ ವರಿಷ್ಠರ ಜತೆ ಮುನಿಸಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಅದಕ್ಕೆ ಪುಷ್ಠಿ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟರಾಜು ನಿನ್ನೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ತಮ್ಮ ಬೆಂಬಲಿಗ ಕೀಲಾರ ಜಯರಾಮುಗೆ ಟಿಕೆಟ್ ಕೊಡದಿದ್ದಕ್ಕೆ ಮರಿತಿಬ್ಬೇಗೌಡ ಮುನಿಸಿಕೊಂಡಿದ್ದಾರೆ. ಈ ನಡುವೆ ಮಂಡ್ಯದಲ್ಲಿ ಮಾತನಾಡಿರುವ ಕಾಂಗ್ರೆಸ್ನ ಮಾಜಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಅವರು, ಕಾಂಗ್ರೆಸ್‌ನತ್ತ ಹಲವು ನಾಯಕರು ಮುಖ ಮಾಡಿದ್ದಾರೆ.
ಜೆಡಿಎಸ್ ಶಾಸಕರೂ ಸಂಪರ್ಕದಲ್ಲಿದ್ದಾರೆ. ವರಿಷ್ಠರ ಬಳಿ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಅತಿ ಶೀಘ್ರದಲ್ಲೇ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಸಿಹಿ ಸುದ್ದಿ ನೀಡಲಿದ್ದಾರೆ ಎನ್ನುವ ಮೂಲಕ ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದಾರೆ.
ಇದನ್ನೂ ಓದಿ: ಮೊಮ್ಮಗಳ ಅಗಲಿಕೆ ದುಃಖ.. ಮಾಜಿ ಸಿಎಂ ಬಿಎಸ್ವೈಗೆ ಸಿಎಂ ಬೊಮ್ಮಾಯಿ ಸಾಂತ್ವನ..
ಇನ್ನೊಂದೆಡೆ ಜೆಡಿಎಸ್ ತೊರೆಯುವ ವಿಚಾರವನ್ನು ಅಲ್ಲಗಳೆದಿರುವ ಸಿ.ಎಸ್.ಪುಟ್ಪರಾಜು ಅವರು, ಶ್ರೀ ಬೀರೇಶ್ವರ ದೇವಾಲಯ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಹೋಗಿದ್ದೆ. ಅಲ್ಲಿ ಯಾವುದೇ ರಾಜಕೀಯ ವಿಚಾರ ಚರ್ಚೆಯಾಗಿಲ್ಲ.
ದೇವೇಗೌಡರು ಎಲ್ಲಿಯವರೆಗೂ ಹೋರಾಟ ಮಾಡ್ತಾರೆ ಅಲ್ಲಿಯವರೆಗೂ ಜತೆಯಲ್ಲಿ ಇರುತ್ತೇನೆ. ಅವರಿಗೆ ರಾಜಕೀಯ ಬೇಡ ಅನಿಸಿದಾಗ ನಾನು ರಾಜಕೀಯ ಬಿಡುವುದಾಗಿ ಸ್ಪಷ್ಟನೆ ನೀಡಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ