ಮಂಡ್ಯ: ಜಿಲ್ಲೆಯ ಅಭಿವೃದ್ಧಿಗಾಗಿ ಜಿಲ್ಲಾ ಪಂಚಾಯತ್‌ನಲ್ಲಿ 90 ಕೋಟಿ ರೂ. ಬಜೆಟ್ ಮಂಡನೆಯಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಸಿಕ್ಕರೆ, ಗ್ರಾಮೀಣ ಇಂಧನವನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕಾವೇರಿ ಸಂಭಾಗಣದಲ್ಲಿ ನಿನ್ನೆ ವಿಶೇಷ ಸಾಮಾನ್ಯ ಸಭೆಯಲ್ಲಿ ಜಿಪಂ ಅಧ್ಯಕ್ಷೆ ನಾಗರತ್ನ ಸ್ವಾಮಿ ಬಜೆಟ್ ಮಂಡಿಸಿದರು. ಬಜೆಟ್ ಮಂಡನೆಗೂ ಮೊದಲು ಸದಸ್ಯರು ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಚರ್ಚೆ ಆರಂಭಿಸಿದರು. ನಂತರ ಈ ವಿಚಾರವಾಗಿ ಸುದೀರ್ಘ ಚರ್ಚೆಗೆ ಜೂನ್ 25ರಂದು ಸಭೆ ಮಾಡಲು ನಿರ್ಧರಿಸಲಾಯಿತು.
ಸರ್ಕಾರಿ ಅನುದಾನವನ್ನೇ ಅವಲಂಬಿಸಿರುವ ಜಿಲ್ಲಾ ಪಂಚಾಯತ್‌ಗೆ 90 ಕೋಟಿ ರೂಪಾಯಿಗಳ ಅನುದಾನದ ನಿರೀಕ್ಷೆಯಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ. ಮೊದಲ ಬಾರಿಗೆ ಹಣಕಾಸು ಆಯೋಗದ ಶಿಫಾರಸಿನಂತೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ಗೆ ವಿಶೇಷ ಅನುದಾನ ನೀಡಲಾಗಿದೆ. ಆದ್ರೆ ಬಜೆಟ್ ಮಂಡನೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇದೇ ವೇಳೆ ಗ್ರಾಮೀಣ ಇಂಧವನ್ನು ನಿರ್ಲಕ್ಷಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.