ಮಂಡ್ಯ: ರಾಜ್ಯ ವಿಧಾನಸಭೆ ಉಪಚುನಾವಣೆಗೆ ದಿನಗಣನೆ ಶುರುವಾಗಿದೆ. ಅಭ್ಯರ್ಥಿಗಳು ಅಖಾಡಕ್ಕೆ ಧುಮುಕಲು ರೆಡಿಯಾಗಿದ್ದಾರೆ. ಈ ಹಿನ್ನೆಲೆ ಇಂದು ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ .ಎಲ್. ದೇವರಾಜು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಬೆಳಗ್ಗೆಯೇ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಂದ ದೇವರಿಗೆ ಪೂಜೆ ಸಲ್ಲಿಸಿ, ಬಿ ಫಾರಂ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ದೇವೇಗೌಡರ ಮನೆಯಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿ, ಬಿ ಫಾರಂ ಪಡೆದುಕೊಂಡಿದ್ದು, ಬೆಂಬಲಿಗರ ಜೊತೆ ಕೆ.ಆರ್.ಪೇಟೆಗೆ ತೆರಳಿದ್ದಾರೆ. ಇನ್ನು ದೇವರಾಜು ನಾಮಪತ್ರ ಸಲ್ಲಿಕೆ ವೇಳೆ, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಜೆಡಿಎಸ್ ಶಾಸಕರು, ಮಾಜಿ ಸಚಿವರು ಪಾಲ್ಗೊಳ್ಳಲಿದ್ದಾರೆ.