ಮಂಡ್ಯ: ಕೊರೊನಾ ಸೋಂಕಿನಿಂದ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪರಿಸರ ಪ್ರೇಮಿ ಕಾಮೇಗೌಡರ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ಏರುಪೇರಾಗಿ ಆರೈಕೆ ಮಾಡುವವರಿಲ್ಲದೆ ಅನ್ನ-ನೀರು ಬಿಟ್ಟಿದ್ದಾರೆ ಎನ್ನಲಾಗಿದೆ.
ದಾಸನದೊಡ್ಡಿ ಗ್ರಾಮದಲ್ಲಿ ಕಟ್ಟೆಗಳನ್ನ ನಿರ್ಮಿಸಿ ಪ್ರಖ್ಯಾತಿಯಾಗಿರುವ ಕಾಮೇಗೌಡರಿಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಮಿಮ್ಸ್‌ಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದರ ಮಧ್ಯೆ ಕಾಲಿಗೆ ಪೆಟ್ಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಯಾರೂ ಜೊತೆಯಲ್ಲಿ ಇಲ್ಲದ ಕಾರಣ ಸಮಸ್ಯೆ ಹೇಳಿಕೊಳ್ಳಲು ಸಾಧ್ಯವಾಗದೆ ತೊಂದರೆ ಎದುರಿಸುತ್ತಿದ್ದಾರೆ ಎನ್ನಲಾಗಿದೆ.
ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಹಾರ ಸೇವಿಸಿದರೆ ಶೌಚಾಲಯಕ್ಕೆ ಹೋಗಬೇಕಾಗುತ್ತೆ ಎಂಬ ಕಾರಣಕ್ಕೆ ಆಹಾರ ತ್ಯಜಿಸಿದ್ದಾರೆ ಎನ್ನಲಾಗುತ್ತಿದೆ.