ಮಂಡ್ಯ : ಒಂದೇ ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇಡೀ ಗ್ರಾಮವನ್ನು ತಾಲೂಕು ಆಡಳಿತ ಸೀಲ್‌ಡೌನ್ ಮಾಡಿದೆ.
ಪಾಂಡವಪುರ ತಾಲೂಕು ಚಿನಕುರಳಿ ಹೋಬಳಿಯ ಕಣಿವೆಕೊಪ್ಪಲು ಗ್ರಾಮ ಸೀಲ್‌ಡೌನ್ ಆಗಿದೆ. ಈ ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಹಾಗಾಗಿ, ಮುನ್ನೆಚ್ಚರಿಕೆಯ ಕ್ರಮವಾಗಿ ಸಂಪೂರ್ಣ ಗ್ರಾಮವನ್ನ ಬಂದ್ ಮಾಡಿದ್ದಾರೆ.
ಮಾಜಿ ಸಚಿವ ಹಾಗೂ ಶಾಸಕ ಸಿ.ಎಸ್. ಪುಟ್ಟರಾಜು ಅವರ ನೇತೃತ್ವದಲ್ಲಿ ಸೀಲ್‌ಡೌನ್ ಮಾಡಲಾಗಿದ್ದು, ಸ್ವತಃ ತಾವೇ ಖುದ್ದು ಗ್ರಾಮಕ್ಕೆ ಭೇಟಿ ನೀಡಿ ಶಾಸಕರು ಪರಿಶೀಲನೆ ನಡೆಸಿದ್ದಾರೆ. ಗ್ರಾಮಕ್ಕೆ ದಿನ ನಿತ್ಯದ ಅಗತ್ಯ ವಸ್ತುಗಳನ್ನ ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.