ಮಂಡ್ಯ: ನಗರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವನ್ನು ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ವೆಂಕಟೇಶ್ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ತಾಲೂಕು ಕೇಂದ್ರಗಳಾದ ಮಳವಳ್ಳಿ,ಮದ್ದೂರು,ನಾಗಮಂಗಲ,ಕೆ.ಆರ್.ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣಗಳಲ್ಲೂ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗಿದೆ. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇನ್ನು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅರಮನೆಯ ಆವರಣದಲ್ಲಿರುವ ತಾಯಿ ಭುವನೇಶ್ವರಿ ದೇವಾಲಯಕ್ಕೆ ಪೂಜೆ ಸಲ್ಲಿಸಿ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ನಾಳೆಯಿಂದ ಗದಗ, ಬಿಜಾಪುರ, ರಾಯಚೂರು ಹಾಗೂ ಇತರ ಜಿಲ್ಲೆಗಳಿಗು ಪ್ರವಾಸ ಕೈಗೊಳ್ಳುತ್ತೇನೆ. ಅಲ್ಲಿಂದ ಬಂದ ನಂತರ ದಸರಾ ಖರ್ಚು ವೆಚ್ಚದ ಲೆಕ್ಕವನ್ನು ನೀಡುತ್ತೇನೆ ಎಂದರು.
ಪ್ರತ್ಯೇಕ ಧ್ವಜದ ಸಾಧಕ-ಭಾದಕಗಳ ಬಗ್ಗೆ ಸಿಎಂ, ಕನ್ನಡಪರ ಸಂಘಟನೆಗಳ ಜೊತೆ ಚರ್ಚಿಸಿ ಅರ್ಥ ಪೂರ್ಣ ತೀರ್ಮಾನಕ್ಕೆ ಬರಲಿದ್ದಾರೆ ಎಂದರು.