ಮಂಡ್ಯ: ಕಾವೇರಿ ತೀರ್ಪಿನ ನಂತರ ಇದೇ ಮೊದಲ ಬಾರಿಗೆ ಕಾವೇರಿ ಕೊಳ್ಳದ ಜನಪ್ರತಿನಿಧಿಗಳು ಒಗ್ಗೂಡಿ ಸಭೆ ನಡೆಸಿದ್ದಾರೆ.
ಕೆಆರ್‌ಎಸ್‌ನ ಕಾವೇರಿ ಸಭಾಂಗಣದಲ್ಲಿ ಸಭೆ ನಡೆಸಿ, ನೀರಾವರಿ ಇಲಾಖೆ ಅಧಿಕಾರಿಗಳಿಂದ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು. ಬಳಿಕ ಬೆಳೆಗೆ ನೀರು ಬಿಡುಗಡೆ ಹೇಗೆ, ನಾಲೆ ಅಭಿವೃದ್ಧಿ ಕಾಮಗಾರಿ, ಕೆರೆಗಳಿಗೆ ನೀರು ತುಂಬಿಸುವುದು, ಮುನ್ನೆಚ್ಚರಿಕೆ ಕ್ರಮಗಳ ಸಂಪೂರ್ಣ ಮಾಹಿತಿ, ತಮಿಳುನಾಡಿಗೆ ಈ ತಿಂಗಳಲ್ಲಿ ಬಿಡಬೇಕಾದ ನೀರಿನ ಪ್ರಮಾಣ, ಮಳೆ ಸಮಸ್ಯೆಯಾದರೆ ಪರ್ಯಾಯ ವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳು ಕುರಿತು ಚರ್ಚೆ ನಡಸಲಾಗಿದೆ.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಮೈಸೂರು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಪುಟ್ಟರಾಜು, ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಎನ್.ಮಹೇಶ್, ನಾಗೇಂದ್ರ, ಯತೀಂದ್ರ, ಎಂ.ಶ್ರೀನಿವಾಸ್, ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್, ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಪೊಲೀಸ್ ಅಧಿಕಾರಿಗಳಾದ ಶೋಭಾರಾಣಿ, ಶಿವಕುಮಾರ್ ಸೇರಿದಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.