ETV Bharat / state

ಡ್ರೈವಿಂಗ್ ವೇಳೆ ಚಾಲಕನಿಗೆ ಲೋ ಬಿಪಿ... ಕ್ಯಾಂಟರ್​ಗೆ ಬಸ್ ಡಿಕ್ಕಿ

author img

By

Published : Sep 11, 2021, 10:19 PM IST

Updated : Sep 11, 2021, 11:28 PM IST

ರಕ್ತದೊತ್ತಡದಲ್ಲಿ ಏರುಪೇರಾಗಿ ಅಸ್ವಸ್ಥರಾದ ಹಿನ್ನೆಲೆ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಬಸ್ ಎದುರಿನ ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದೆ.

ಬಸ್ ಅಪಘಾತ
ಬಸ್ ಅಪಘಾತ

ಮಂಡ್ಯ: ಚಾಲಕನಿಗೆ ಲೋ ಬಿಪಿ ಆದ ಹಿನ್ನೆಲೆ ನಿಯಂತ್ರಣ ತಪ್ಪಿ ಕ್ಯಾಂಟರ್​ಗೆ ಕೆಎಸ್‌ಆರ್‌ಟಿಸಿ ಬಸ್ ಗುದ್ದಿದೆ. ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಗಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಾಬುರಾಯನಕೊಪ್ಪಲು ಬಳಿ ಅಪಘಾತ ನಡೆದಿದೆ.

ಮೈಸೂರಿನಿಂದ ಬೆಂಗಳೂರು ಕಡೆ ಬಸ್ ತೆರಳುತ್ತಿದ್ದ ವೇಳೆ ಚಾಲಕ ಮಂಜುನಾಥ್​​ಗೆ ರಕ್ತದೊತ್ತಡದಲ್ಲಿ ಏರುಪೇರಾಗಿದೆ. ಈ ವೇಳೆ ಚಾಲಕ ಬಸ್ ಮೇಲಿನ ನಿಯಂತ್ರಣ ಕಳೆದುಕೊಂಡು ಎದುರು ಚಲಿಸುತ್ತಿದ್ದ ಕ್ಯಾಂಟರ್‌ಗೆ ಗುದ್ದಿದ್ದಾನೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಚಾಲಕನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಯಾಂಟರ್​ಗೆ ಬಸ್ ಡಿಕ್ಕಿ

ನಂಜನಗೂಡು ಡಿಪೋಗೆ ಸೇರಿದ ಕೆಎಸ್ಆರ್‌ಟಿಸಿ ಬಸ್ ಇದಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಬೈಕ್‌ ನಲ್ಲಿ ತೆರಳುತ್ತಿದ್ದಾಗ ಭೀಕರ ಅಪಘಾತ: ಟಾಲಿವುಡ್‌ ನಟ ಸಾಯಿ ಧರಂ ತೇಜ್‌ ಆರೋಗ್ಯ ಸ್ಥಿರ

Last Updated : Sep 11, 2021, 11:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.