ETV Bharat / state

ಮಂಡ್ಯ: ಬಿಜೆಪಿ ಸರ್ಕಾರದ ವಿರುದ್ಧ ಕುಸುಮ ಕುಮಾರ್ ಚೌಧರಿ ವಾಗ್ದಾಳಿ - University Grand Commission

ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಮಾಹಿತಿ ಬಿಚ್ಚಿಡುತ್ತಿದೆ. ಬಿಜೆಪಿ ಸರ್ಕಾರ ಲೂಟಿಯಲ್ಲಿ ಬಿಸಿಯಾಗಿದೆ ಎಂದು ತೆಲಂಗಾಣದ ಕಾಂಗ್ರೆಸ್ ಪ್ರದೇಶ್ ಕಾಂಗ್ರೆಸ್ ಸಮಿತಿ ಮಾಜಿ ಕಾರ್ಯಾಧ್ಯಕ್ಷ ಕುಸುಮ ಕುಮಾರ್ ಚೌಧರಿ ತಿಳಿಸಿದ್ದಾರೆ.

ಕುಸುಮ ಕುಮಾರ್ ಚೌಧರಿ
ಕುಸುಮ ಕುಮಾರ್ ಚೌಧರಿ
author img

By

Published : Jan 19, 2023, 9:40 PM IST

ಬಿಜೆಪಿ ಸರ್ಕಾರದ ವಿರುದ್ಧ ಕುಸುಮ ಕುಮಾರ್ ಚೌಧರಿ ವಾಗ್ದಾಳಿ

ಮಂಡ್ಯ: ಬಿಜೆಪಿ ಸರ್ಕಾರ ಸುಸೈಡ್ ಸರ್ಕಾರ ಎಂದು ಬಿಜೆಪಿ ಸರ್ಕಾರದ ವಿರುದ್ಧ ತೆಲಂಗಾಣದ ಕಾಂಗ್ರೆಸ್ ಪ್ರದೇಶ್ ಕಾಂಗ್ರೆಸ್ ಸಮಿತಿ ಮಾಜಿ ಕಾರ್ಯಾಧ್ಯಕ್ಷ ಕುಸುಮ ಕುಮಾರ್ ಚೌಧರಿ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಸಕ್ಸಸ್ ಕಂಡಿದೆ. ನಮ್ಮ ನಾಯಕ ರಾಹುಲ್ ಗಾಂಧಿ ಪಾದಯಾತ್ರೆ ಗ್ರ್ಯಾಂಡ್ ಸಕ್ಸಸ್ ಮಾಡಿದ್ದಾರೆ. ಡಬಲ್ ಇಂಜಿನ್, ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಸರ್ಕಾರ. ಶೇ 40ರಷ್ಟು ಕಮಿಷನ್​ ಸರ್ಕಾರವಾಗಿದೆ. ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಮಾಹಿತಿ ಬಿಚ್ಚಿಡುತ್ತಿದೆ. ಬಿಜೆಪಿ ಸರ್ಕಾರ ಲೂಟಿಯಲ್ಲಿ ಬಿಸಿಯಾಗಿದೆ ಎಂದರು.

ಕೋವಿಡ್​ನಲ್ಲಿ ಕೋಟಿ ಕೋಟಿ ಲೂಟಿ ಮಾಡಿದ್ದಾರೆ. ಕೋವಿಡ್ ನಿರ್ವಹಣೆ ಸರಿಯಾಗಿ ಬಿಜೆಪಿ ಸರ್ಕಾರ ಮಾಡಿಲ್ಲ. ಕೊರೊನಾ ಅಲೆ ಎದ್ದಾಗ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಪ್ರಧಾನಿ ಬ್ಯುಸಿ ಇದ್ರು. ಗುತ್ತಿಗೆದಾರರು, ಬಡವರು, ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಸುಸೈಡ್ ಸರ್ಕಾರ. ಜನವರಿ 27ಕ್ಕೆ ಪ್ರಜಾಧ್ವನಿ ಸಮಾವೇಶ ಮಂಡ್ಯದಲ್ಲಿ ನಡೆಯಲಿದೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಮಾವೇಶದಲ್ಲಿ ಸುರ್ಜೆವಾಲ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದರು.

ಯುಜಿಸಿ ಕಚೇರಿ ಸ್ಥಳಾಂತರದ ಬಗ್ಗೆ ಸಿದ್ದರಾಮಯ್ಯ ಆಕ್ಷೇಪ: ಇನ್ನೊಂದೆಡೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಅಮಿತ್‌ ಶಾ ವಿರುದ್ಧ ಹರಿಹಾಯ್ದಿದ್ದಾರೆ. ಪಿಎಂ- ಹೆಚ್​ಎಂ ಕರ್ನಾಟಕಕ್ಕೆ ಪ್ರತಿ ಸಾರಿ ಬಂದಾಗಲೂ ಕನ್ನಡಿಗರಿಗೆ ಆಘಾತ ಮಾಡಿಯೇ ಬರುತ್ತಿದ್ದಾರೆ. ಈ ಬಾರಿ ಬೆಂಗಳೂರಿನಲ್ಲಿದ್ದ ಯುಜಿಸಿ ಕಚೇರಿಯನ್ನು ಸ್ಥಳಾಂತರ ಮಾಡಿ ಕನ್ನಡಿಗರ ಮತ್ತೊಂದು ಹಕ್ಕು ಕಸಿದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಕಲಿಯುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳ ಮಕ್ಕಳಿಗೆ ಹಾಗೂ ಅಧ್ಯಾಪಕರುಗಳು, ಕಾಲೇಜು, ವಿವಿಗಳ ಆಡಳಿತ ಮಂಡಳಿಯವರು ಇನ್ನು ಮುಂದೆ ಸಣ್ಣ ಸಣ್ಣ ಸಮಸ್ಯೆಗಳಾದರೂ ದೆಹಲಿಗೆ ಹೋಗಬೇಕಾದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಸಚಿವರು ಸುಮ್ಮನಿರುವುದು ಏಕೆ?: ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗದ ಕಚೇರಿ ಬೆಂಗಳೂರು ಬಿಟ್ಟು ದೆಹಲಿಗೆ ಹೋಗುತ್ತಿದ್ದರೂ ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಲಿ, ಮುಖ್ಯಮಂತ್ರಿಗಳಾಗಲಿ ಸಣ್ಣ ಪ್ರತಿಭಟನೆಯನ್ನೂ ದಾಖಲಿಸಿಲ್ಲ. ಗುಜರಾತ್ ಮೂಲದ ಈ ಜೋಡಿ ರಾಜ್ಯದ ಪ್ರತಿಯೊಂದನ್ನೂ ಕಿತ್ತುಕೊಳ್ಳುತ್ತಿದ್ದಾರೆ. ಧಮ್ಮು, ತಾಕತ್ತಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಬಿಜೆಪಿ ಸರ್ಕಾರವು ರಾಜ್ಯದ ಸ್ವಾಭಿಮಾನವನ್ನೇ ದರೋಡೆ ಮಾಡುತ್ತಿದ್ದರೂ ಉಸಿರೆ ಎತ್ತದೇ ರಾಜ್ಯದ 7 ಕೋಟಿ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಗರಂ ಆದರು.

ಓದಿ: ಯುಜಿಸಿ ಕಚೇರಿ ಸ್ಥಳಾಂತರ ಮಾಡಿ‌ ಕನ್ನಡಿಗರ ಮತ್ತೊಂದು ಹಕ್ಕಿಗೆ ಕನ್ನ: ವಿಪಕ್ಷ ನಾಯಕ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.