ETV Bharat / state

ಹಲವು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ರೈತರು

ಕೆ.ಆರ್. ಪೇಟೆ ತಾಲೂಕಿನ ಗುಬ್ಬಳ್ಳಿ ಬಳಿಯ ಕಬ್ಬಿನ ಗದ್ದೆಯಲ್ಲಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಹಲವು ತಿಂಗಳಿನಿಂದ ಈ ಚಿರತೆ ಸಾಕ್ಷೀಬೀಡು ಸುತ್ತಮುತ್ತ ಕಾಣಿಸಿಕೊಂಡು ರೈತರಲ್ಲಿ ಆತಂಕ ಮೂಡಿಸಿತ್ತು.

Leopard Captured in Mandya
ಮಂಡ್ಯದಲ್ಲಿ ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ
author img

By

Published : Aug 28, 2020, 9:32 PM IST

ಮಂಡ್ಯ : ಜಾನುವಾರುಗಳ ಮೇಲೆ ದಾಳಿ ಮಾಡುತ್ತ ರೈತರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆ.ಆರ್. ಪೇಟೆ ತಾಲೂಕಿನ ಗುಬ್ಬಳ್ಳಿ ಬಳಿಯ ಕಬ್ಬಿನ ಗದ್ದೆಯಲ್ಲಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಹಲವು ತಿಂಗಳಿನಿಂದ ಈ ಚಿರತೆ ಸಾಕ್ಷೀಬೀಡು ಸುತ್ತಮುತ್ತ ಕಾಣಿಸಿಕೊಂಡು ರೈತರಲ್ಲಿ ಆತಂಕ ಮೂಡಿಸಿತ್ತು. ಕೆಲ ರೈತರ ಜಾನುವಾರುಗಳ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು.

ಹೀಗಾಗಿ, ಸಾರ್ವಜನಿಕರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಚಿರತೆ ಸೆರೆಗೆ ಗುಬ್ಬಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇಟ್ಟಿದ್ದರು. ಈ ಬೋನಿಗೆ ಚಿರತೆ ಬಿದ್ದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳಾದ ಗಂಗಾಧರ್ ಸುರೇಶ್, ಶಿವಕುಮಾರ್ ಚಿರತೆಯ ವೈದ್ಯಕೀಯ ಪರೀಕ್ಷೆ ನಡೆಸಿ ಕಾಡಿಗೆ ಬಿಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.