ಮಂಡ್ಯ: ಚಿರತೆ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಯತ್ತಂಬಾಡಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಯತ್ತಂಬಾಡಿ ಗ್ರಾಮದ ಬಯಲು ಪ್ರದೇಶದಲ್ಲಿ ಇಂದು ಬೆಳಗ್ಗೆ ಚಿರತೆ ಕಂಡು ಗ್ರಾಮಸ್ಥರು ಗಾಬರಿಯಾಗಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಚಿರತೆ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.
ಸಾವನ್ನಪ್ಪಿದ ಚಿರತೆ ನೋಡಲು ಜನರು ಮುಗಿಬಿದ್ದಿದ್ದಾರೆ. ಚಿರತೆ ಯಾವ ಕಾರಣಕ್ಕೆ ಮೃತಪಟ್ಟಿದೆ ಎಂಬುದು ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಮತ್ತಷ್ಟು ಮಾಹಿತಿ ತಿಳಿಯಲಿದೆ ಎಂದು ಅರಣ್ಯಾಧಿಕಾರಿ ತಿಳಿಸಿದ್ದಾರೆ.