ಮಂಡ್ಯ: ಶ್ರೀರಂಗಪಟ್ಟಣದ ವಿಶ್ವವಿಖ್ಯಾತ ಪ್ರವಾಸಿ ತಾಣವಾದ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ. ಹೀಗಾಗಿ ಸಿಬ್ಬಂದಿ ಹಾಗೂ ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಅಲ್ಲದೆ ಬೃಂದಾವನ ಪ್ರವೇಶಕ್ಕೆ ಸೋಮವಾರ ನಿರ್ಬಂಧ ವಿಧಿಸಲಾಗಿದೆ.
ಕಳೆದ 20 ದಿನಗಳ ಅಂತರದಲ್ಲಿ ನಾಲೈದು ಬಾರಿ ಕಾಣಿಸಿಕೊಂಡಿರುವ ಚಿರತೆ ಇಡೀ ಬೃಂದಾವನ ಹಾಗೂ ಅಣೆಕಟ್ಟೆಯಲ್ಲೆಲ್ಲಾ ತಿರುಗಾಡಿದೆ. ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಹಾಗೂ ಭಾನುವಾರ ಮಧ್ಯಾಹ್ನ 1.50ಕ್ಕೆ ಅಣೆಕಟ್ಟೆಯ ಮೀನುಗಾರಿಕೆ ಇಲಾಖೆ ಬಳಿ ಚಿರತೆ ಕಾಣಿಸಿಕೊಂಡಿದೆ.
ಅ.21ರಂದು ಹಾಡಹಗಲೇ ಮೊದಲ ಬಾರಿಗೆ ಚಿರತೆ ಕಾಣಿಸಿಕೊಂಡಿತ್ತು. ನಂತರ ಶ್ರೀರಂಗಪಟ್ಟಣದ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಬೋನ್ ಸಹ ಇಟ್ಟಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಈಗ ಚಿರತೆಯು ಬೃಂದಾವನದ ಟಿಕೆಟ್ ಕೌಂಟರ್ ಬಳಿ ಕಾಣಿಸಿಕೊಂಡಿದೆ. ಇದು ಜನರಲ್ಲಿ ಇನ್ನಷ್ಟು ಆತಂಕವನ್ನು ಉಂಟುಮಾಡಿದೆ.
ಇದನ್ನೂ ಓದಿ: ಕೆಆರ್‌ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ; ಪ್ರವಾಸಿಗರಿಗೆ ನಿರ್ಬಂಧ