ಮಂಡ್ಯ: ಜಿಲ್ಲೆಯಲ್ಲಿ ಮತ್ತೆ ಸಂಪೂರ್ಣ ಲಾಕ್‍ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಅಶ್ವಥಿ ಆದೇಶ ಹೊರಡಿಸಿದ್ದಾರೆ. ಕೊರೊನಾ ನಿಯಂತ್ರಣ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ವಾರದ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್ ಮಾಡಿದ್ದು, ಸಾರ್ವಜನಿಕರಿಗೆ ಮೂರು ದಿನ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.
ಕಳೆದ ವಾರವೂ ಕೂಡ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಮಾಡಲಾಗಿತ್ತು. ಇದೀಗ ಮತ್ತೆ ಅದೇ ಮಾದರಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ. ಈ ದಿನಗಳಲ್ಲಿ ಹಣ್ಣು, ತರಕಾರಿ, ದಿನಸಿ, ಮಾಂಸ, ಮದ್ಯ ಮಾರಾಟಕ್ಕೆ ನಿಷೇಧ ಹೇರಿರುವುದಲ್ಲದೆ, ಬ್ಯಾಂಕ್, ಅಂಚೆ ಕಚೇರಿ, ಎಲ್‍ಐಸಿ ಕಚೇರಿಗಳು ಸಹ ಸಂಪೂರ್ಣ ಬಂದ್ ಆಗಿರಲಿವೆ.
ಈ ವೇಳೆಯಲ್ಲಿ ಮೆಡಿಕಲ್, ಹಾಲಿನ ಅಂಗಡಿ, ಎಟಿಎಂ ಹಾಗೂ ಪೆಟ್ರೋಲ್ ಬಂಕ್‍ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಜೂನ್ 14, 15,17 ರಂದು ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 11 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಸೋಂಕಿತರ ಸಂಖ್ಯೆ ಇಳಿಕೆ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಸಾರ್ವಜನಿಕರು ಜಿಲ್ಲಾಡಳಿತದ ಆದೇಶವನ್ನು ಪಾಲಿಸಿ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Viral Video: ಪ್ರಸಾದದೊಳಗೆ ಉಗಿದು ಭಕ್ತರಿಗೆ ಹಂಚುತ್ತಿರುವ ಬಾಬಾ