ಮಂಡ್ಯ : ಅಪ್ರಾಪ್ತ ಯುವತಿಯ ಜೊತೆ ವಿವಾಹಿತ ವ್ಯಕ್ತಿ ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಿದರಹಳ್ಳಿ ಗ್ರಾಮದ ಪ್ರಕಾಶ್ ಎಂಬಾತ ಡಾಣಹಳ್ಳಿಯ ಅಪ್ರಾಪ್ತ ಯುವತಿಯೊಂದಿಗೆ ಪರಾರಿಯಾಗಿದ್ದಾನೆ. ಪ್ರಕಾಶ್‌ಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ ಎನ್ನಲಾಗಿದೆ.
ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿರುವ ಬಾಲಕಿಯ ಕುಟುಂಬಸ್ಥರು ಅಪಹರಿಸಿ ಬಲವಂತವಾಗಿ ಮದುವೆಯಾಗಿರುವ ಆರೋಪ ಮಾಡಿದ್ದಾರೆ. ಸದ್ಯ ಕಿಕ್ಕೇರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಯುವಕ ಹಾಗೂ ಯುವತಿಗಾಗಿ ಹುಡುಕಾಟ ಶುರು ಮಾಡಿದ್ದಾರೆ.