ಮಂಡ್ಯ : ಟ್ಯೂಷನ್ಗೆ ತೆರಳಿದ ಹತ್ತನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ಮಂಡ್ಯ ಜಿಲ್ಲಾ ಪೊಲೀಸರು ಎರಡು ವಾರಗಳಲ್ಲಿ ಚಾರ್ ಶೀಟ್ ಸಲ್ಲಿಸಿದ್ದಾರೆ. ನ್ಯಾಯಾಲಯಕ್ಕೆ 638 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಮಳವಳ್ಳಿ ಪೊಲೀಸರು. ಇತ್ತ ಪ್ರಕರಣ ವಿಚಾರಣೆಗೆ ವಿಶೇಷ ಸರ್ಕಾರಿ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸುವಂತೆ ಸರ್ಕಾರಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.
10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಟ್ಯೂಷನ್ ಮೇಲ್ವಿಚಾರಕ ಕಾಂತರಾಜು ಎಂಬಾತನಿಂದ ಹೇಯ ಕೃತ್ಯ ನಡೆದಿತ್ತು. ಪ್ರಕರಣ ಸೂಕ್ಷ್ಮತೆ ಅರಿತು ಮಳವಳ್ಳಿ ಡಿವೈಎಸ್ಪಿ ನವೀನ್ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು.
ಘಟನೆ ನಡೆದ ಎರಡೇ ವಾರದಲ್ಲಿ ತನಿಖಾ ತಂಡದಿಂದ ಕೋರ್ಟ್ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ತನಿಖೆಯನ್ನ ಪಾರದರ್ಶಕ, ವೈಜ್ಞಾನಿಕವಾಗಿ ನಡೆಸಲಾಗಿದೆ. ಎಲ್ಲ ಸಾಕ್ಷಿಗಳನ್ನು ಸಂಗ್ರಹಿಸಿ ವಿವರವಾದ ಚಾರ್ಜ್ ಶೀಟ್ ಸಲ್ಲಿಸಿದ್ದೇವೆ. ಪ್ರಕರಣದ ವಿಚಾರಣೆಗೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಮಂಡ್ಯ ಎಸ್ಪಿ ಎನ್. ಯತೀಶ್ ತಿಳಿಸಿದ್ದಾರೆ.
ಇದನ್ನೂ ಓದಿ : ಮಂಡ್ಯ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ: ಸಂತ್ರಸ್ತೆಯ ಕುಟುಂಬಕ್ಕೆ ₹10 ಲಕ್ಷ ಪರಿಹಾರ