ಮಂಡ್ಯ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ವಸತಿಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿರೋ ನಂದಿನಿ ಲಾಡ್ಜ್‌ನಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದ ಶಿವಶಂಕರ್ ರಾಜ್ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ರಾತ್ರಿ ಲಾಡ್ಜ್ಗೆ ಬಂದು ಕೊಠಡಿ ಪಡೆದು ಒಳ ಹೋದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ.
ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು,ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.