ಮಂಡ್ಯ: ಉಳುಮೆ ನಂತರ ದನಗಳಿಗೆ ಕೆರೆಯಲ್ಲಿ ನೀರು ಕುಡಿಸಲು ಹೋಗಿದ್ದ ಯುವಕನೊಬ್ಬ ಕೆರೆಯಲ್ಲಿ ಕಾಲುಜಾರಿ ಮುಳುಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೊಡ್ಡಗಾಡಿಗನಹಳ್ಳಿ ಗ್ರಾಮದ ಡಿ.ಆರ್.ಕಾರ್ತಿಕ್(23) ಮೃತ ಯುವಕ. ದನಗಳೊಂದಿಗೆ ತಮ್ಮ ಜಮೀನನ್ನು ಉಳುಮೆ ಮಾಡಿ, ನಂತರ ದನಗಳಿಗೆ ನೀರು ಕುಡಿಸಿ ಮೈತೊಳೆಯುತ್ತಿರುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.