ಮಂಡ್ಯ: ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿ 80ಕ್ಕೂ ಹೆಚ್ಚು ಬೀದಿ ನಾಯಿಗಳು ಓಡಾಡುತ್ತಿದ್ದು, ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.
ಬಡಾವಣೆಯಲ್ಲಿ ಸುಮಾರು 80ಕ್ಕೂ ಹೆಚ್ಚು ಬೀದಿ ನಾಯಿಗಳು ಓಡಾಡುತ್ತಿವೆ. ಎಲ್ಲಿಂದಲೋ ಬಂದಿರುವ ಶ್ವಾನಗಳ ಗುಂಪು ದಾಳಿ ಮಾಡುವ ಮೊದಲೇ ನಗರಸಭೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಬಡಾವಣೆ ನಿವಾಸಿಗಳು ಆಗ್ರಹಿಸಿದ್ದಾರೆ.
ಬೀದಿ ನಾಯಿಗಳ ಕಾಟದಿಂದ ಬಡಾವಣೆ ನಿವಾಸಿಗಳು ಹೊರಗೆ ಬರಲು ಆತಂಕ ಪಡುತ್ತಿದ್ದಾರೆ. ಶ್ವಾನಗಳು ಮಕ್ಕಳ ಮೇಲೆ ದಾಳಿ ಮಾಡುವುದಕ್ಕೂ ಮೊದಲು ಇವುಗಳನ್ನು ಹಿಡಿದು ಮೂಲ ಸ್ಥಾನಕ್ಕೆ ಬಿಡಬೇಕು. ಜೊತೆಗೆ ಇವು ಎಲ್ಲಿಂದ ಬಂದಿವೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.