ETV Bharat / state

Mandya Accident: ಮಂಡ್ಯದ ಗೆಜ್ಜನಗೆರೆ ಬಳಿ ಕಾರುಗಳ ನಡುವೆ ಅಪಘಾತ; ಸ್ಥಳದಲ್ಲೇ ಮೂವರು ಸಾವು

ಮಂಡ್ಯದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Accident between Two cars in Mandya
ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ
author img

By

Published : Jun 20, 2023, 3:25 PM IST

Updated : Jun 20, 2023, 4:37 PM IST

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ

ಮಂಡ್ಯ: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇ ಅಕ್ಷರಶಃ ಸಾವಿನ ಕೂಪವಾಗಿ ಮಾರ್ಪಡುತ್ತಿದೆ. ರಸ್ತೆ ಉದ್ಘಾಟನೆಯಾದಾಗಿನಿಂದ ಸುಮಾರು 500ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಗೆಜ್ಜನಗೆರೆ ಬಳಿ ನಡೆದ ಕಾರುಗಳ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾದರು. ನೀರಜ್ ಕುಮಾರ್, ಸೆಲ್ವಿ ಹಾಗು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಸಾಗರ್ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಮದ್ದೂರು ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗೂಡ್ಸ್​ ವಾಹನದ ಚಕ್ರಕ್ಕೆ ಸಿಲುಕಿ ಬಾಲಕಿ ಸಾವು: ಹಾಲಿನ ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಪುಟ್ಟ ಬಾಲಕಿ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಡಿ. ಹೊಸೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಿಫಾ (3 ವರ್ಷ) ಮೃತ ಬಾಲಕಿ. ಈಕೆ ಸರ್ವರ್ಖಾನ್ ಎಂಬವರ ಪುತ್ರಿ. ಬೆಳಗ್ಗೆ ಹಾಲು ತೆಗೆದುಕೊಂಡು ಹೋಗುವಾಗ ವಾಹನವನ್ನು ಹಿಂದಕ್ಕೆ ತೆಗೆದಿದ್ದು ಬಾಲಕಿ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಕಡಿವಾಣಕ್ಕೆ ಆಟೋ ನಂಬರಿಂಗ್: ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ನಿಟ್ಟಿನಲ್ಲಿ ಬಹುತೇಕ ಪ್ರಕರಣಗಳಲ್ಲಿ ಆಟೋಗಳನ್ನು ಬಳಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾದ ಬೆನ್ನಲ್ಲೇ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮೀಷನರೆಟ್ ವಿನೂತನ ನಿರ್ಧಾರಕ್ಕೆ ಮುಂದಾಗಿದೆ.

ಅವಳಿ ನಗರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆಟೋಗಳು ಸಂಚಾರ ನಡೆಸುತ್ತಿವೆ. ಆಟೋಗಳು ಸಂಚಾರಿ ನಿಯಮ ಉಲ್ಲಂಘನೆ ಮಾಡುವುದರ ಜೊತೆಗೆ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸುವುದು ಮಾತ್ರವಲ್ಲದೆ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಕಮೀಷನರೆಟ್ ಮುಂದಾಗಿದೆ. ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಆಟೋರಿಕ್ಷಾಗಳಿಗೆ ಹೊಸದಾಗಿ ನಂಬರಿಂಗ್ ವ್ಯವಸ್ಥೆ ಜಾರಿಗೆ ತರುತ್ತಿದೆ.

ಎಲ್ಲ ಆಟೋ ಚಾಲಕರು ತಮ್ಮ ವಾಹನಗಳ ಕಾಗದ ಪತ್ರಗಳನ್ನು ಪೊಲೀಸ್ ಠಾಣೆಗೆ ಹಾಜರುಪಡಿಸಿ ಪೊಲೀಸ್ ಠಾಣೆ ಪೂರೈಸುವ ಆಟೋ ನಂಬರಿಂಗ್ ಹಾಕಿಕೊಂಡು ಸಂಚಾರ ಮಾಡುವಂತೆ ಸೂಚನೆ ನೀಡಿದೆ. ಅನಧಿಕೃತವಾಗಿ ಓಡಾಡುವ ಆಟೋಗಳಿಗೆ ಹಾಗೂ ಕಾನೂನುಬಾಹಿರ ಕೃತ್ಯಗಳಲ್ಲಿ ಬಳಸುವ ಆಟೋಗಳನ್ನು ಮಟ್ಟ ಹಾಕಲು ಕಮಿಷನರೆಟ್ ನಿರ್ಧರಿಸಿದೆ.

ಅವಳಿ ನಗರದಲ್ಲಿ ನಂಬರಿಂಗ್ ವ್ಯವಸ್ಥೆಗೆ ಒಳಪಡದೇ ಬೇಕಾಬಿಟ್ಟಿ ಓಡಾಡುವ ಆಟೋಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರು ನೀಡಿದ್ದಾರೆ. ಸಾರ್ವಜನಿಕರು ಸುರಕ್ಷತಾ ಪ್ರಯಾಣದ ದೃಷ್ಟಿಯಿಂದ ಆಟೋದಲ್ಲಿ ಪ್ರಯಾಣಿಸುವ ಮುನ್ನ ಪೊಲೀಸ್ ಇಲಾಖೆ ನಂಬರಿಂಗ್ ಖಚಿತಪಡಿಸಿಕೊಂಡು ಓಡಾಡುವಂತೆ ಸೂಚನೆ ನೀಡಿದೆ. ಅಲ್ಲದೇ ಅಪರಾಧ ಪ್ರಕರಣಗಳ ಕಡಿವಾಣಕ್ಕೆ ಪೊಲೀಸ್ ಇಲಾಖೆ ಇಂತಹದೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಾರ್ವಜನಿಕರ ಸಹಕಾರ ಕೂಡ ಅಗತ್ಯವಾಗಿದೆ.

ಇದನ್ನೂ ಓದಿ: ಸ್ನೇಹಿತರ ಜಾಲಿ ರೈಡ್​ಗೆ ಫುಡ್ ಡೆಲಿವರಿ ಬಾಯ್​​ ಬಲಿ.. ಅಪಘಾತ ಎಸಗಿ ಮೃತದೇಹ 100 ಮೀಟರ್​ ಎಳೆದೊಯ್ದರು!

Last Updated : Jun 20, 2023, 4:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.