ಮಂಡ್ಯ: 15ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ನ ಸೀಸನ್ ಇಂದು ಅಂತ್ಯಗೊಳ್ಳಲಿದೆ. ಗುಜರಾತ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ಪ್ರಶಸ್ತಿಗೋಸ್ಕರ ಕಾದಾಟ ನಡೆಸಲಿವೆ.
ಈ ಮಹತ್ವದ ಪಂದ್ಯಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದ್ದು, ಈಗಾಗಲೇ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಭಾನುವಾರ ರಾತ್ರಿ 8 ಗಂಟೆಗೆ ಪಂದ್ಯ ಆರಂಭಗೊಳ್ಳಲಿದ್ದು, ಅದಕ್ಕೂ ಮುಂಚಿತವಾಗಿ ಕೆಲ ನಿಮಿಷಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಈ ಕಾರ್ಯಕ್ರಮಕ್ಕೆ ಮಂಡ್ಯದ ಕಲಾವಿದರು ಮೆರುಗು ನೀಡಲಿದ್ದಾರೆ.
ಸಮಾರೋಪ ಕಾರ್ಯಕ್ರಮದಲ್ಲಿ ಮಂಡ್ಯದ ಕಲಾವಿದರಿಂದ ಕಲಾ ಪ್ರದರ್ಶನ ನಡೆಯಲಿದೆ. ಚಿಕ್ಕರಸಿನಕೆರೆ ಚಿಕ್ಕ ಬೋರಯ್ಯ, ಸಂತೆ ಕಸಲಗೆರೆ ಬಸವರಾಜು ನೇತೃತ್ವದ ಜಾನಪದ ಕಲಾ ತಂಡ ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ, ಚರ್ಮ ವಾದ್ಯಗಳ ಪ್ರದರ್ಶನ ನೀಡಲಿದ್ದಾರೆ.
ಇದನ್ನೂ ಓದಿ: GT vs RR: ಫೈನಲ್ ಕಿರೀಟ ಯಾರ ಮುಡಿಗೆ?.. ಎರಡು ತಿಂಗಳ ರೋಚಕತೆಗೆ ಮೋದಿ ಮೈದಾನದಲ್ಲಿ ತೆರೆ