ETV Bharat / state

ಕೊರೊನಾ ಕಟ್ಟೆಚ್ಚರ: ಅಗತ್ಯ ವಸ್ತುಗಳನ್ನು ಬಿಟ್ಟು ಉಳಿದೆಲ್ಲ ಅಂಗಡಿಗಳ ಮುಚ್ಚಿಸಿದ ಅಧಿಕಾರಿಗಳು - ಮಂಡ್ಯ ಕೊರೊನಾ ನಿಯಮ ಉಲ್ಲಂಘನೆ

ಎಷ್ಟೇ ಹೇಳಿದರು, ಜಾಗೃತಿ ಮೂಡಿಸಿದರೂ ಅನಗತ್ಯ ತಿರುಗಾಟ, ವೈಯಕ್ತಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಕಾರಣ ಅನಿವಾರ್ಯವಾಗಿ ಅನಗತ್ಯ ಅಂಗಡಿಗಳನ್ನು ಮುಚ್ಚಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

Mandya
Mandya
author img

By

Published : Apr 22, 2021, 9:48 PM IST

ಮಂಡ್ಯ: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಿನಸಿ, ತರಕಾರಿ, ಹಾಲಿನ ಕೇಂದ್ರ, ಔಷಧ ಅಂಗಡಿ ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಅಂಗಡಿಗಳನ್ನು ಮಾರುಕಟ್ಟೆ, ವಿವಿ ರಸ್ತೆ, ನೂರಡಿ ರಸ್ತೆ ಸೇರಿದಂತೆ ನಗರದ ವಿವಿಧೆಡೆ ಗುರುವಾರ ನಗರಸಭೆ ಅಧಿಕಾರಿಗಳು ಮುಚ್ಚಿಸಿದರು.

ಜಿಲ್ಲೆಯಲ್ಲಿ ಮಂಡ್ಯ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆ. ಅಲ್ಲದೇ ನಿತ್ಯವೂ ಚಿಕಿತ್ಸೆಗೆ ಸ್ಪಂದಿಸದೇ ಸಾವುಗಳು ಸಂಭವಿಸುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಎಷ್ಟೇ ಹೇಳಿದರು, ಜಾಗೃತಿ ಮೂಡಿಸಿದರೂ ಅನಗತ್ಯ ತಿರುಗಾಟ, ವೈಯಕ್ತಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಕಾರಣ ಅನಿವಾರ್ಯವಾಗಿ ಅನಗತ್ಯ ಅಂಗಡಿಗಳನ್ನು ಮುಚ್ಚಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ವಾರಾಂತ್ಯದ ಲಾಕ್‌ಡೌನ್‌ ಒಂದು ದಿನ ಬಾಕಿ ಇರುವಾಗಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ ಕಾರಣ ಮಧ್ಯಾಹ್ನದ ನಂತದ ನಗರದಲ್ಲಿ ಬಂದ್‌ ವಾತಾವರಣ ನಿರ್ಮಾಣವಾಗಿತ್ತು. ಇದರಿಂದ ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಮುಗಿಬಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ನಗರಸಭೆ ಪೌರಾಯಕ್ತ ಎಸ್‌.ಲೋಕೇಶ್‌, ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಚಾರವನ್ನು ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ತೀರಾ ಅವಶ್ಯಕವಲ್ಲದ ಚಿನ್ನ, ಬಟ್ಟೆ ಅಂಗಡಿ, ಎಲೆಕ್ಟ್ರಾನಿಕ್‌, ಜ್ಯೂಸ್‌ ಸೆಂಟರ್‌, ಪುಸ್ತಕದ ಅಂಗಡಿ, ಚಪ್ಪಲಿ, ಗಡಿಯಾರ ಸೇರಿದಂತೆ ವಿವಿಧ ಅಂಗಡಿಗಳನ್ನು ಮೇ 4ರವರೆಗೆ ಮುಚ್ಚಿಸಲಾಗುತ್ತಿದೆ ಎಂದು ತಿಳಿಸಿದರು.

ವಾರಾಂತ್ಯದ ಲಾಕ್‌ಡೌನ್‌ಗೆ ಇನ್ನೂ ಒಂದು ದಿನ ಬಾಕಿ ಇದ್ದರೂ, ಪ್ರಕರಣ ಹೆಚ್ಚಳವನ್ನು ಗಮನಿಸಿದ ಬಹುತೇಕ ಅಂಗಡಿ ಮಾಲೀಕರು ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸದೇ ಅಂಗಡಿ ಮುಚ್ಚಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಹಮತ ವ್ಯಕ್ತಪಡಿಸಿದರು. ಕೆಲವರು ಆಕ್ಷೇಪ ವ್ಯಕ್ತಪಡಿಸಿದರು.

ಸರ್ಕಾರದ ಮಾರ್ಗಸೂಚಿ ಅನ್ವಯ ಹೋಟೆಲ್‌ಗಳಲ್ಲಿ ಪಾರ್ಸಲ್‌ಗಳನ್ನು ಮಾತ್ರ ಮಾಡಬೇಕು ಎಂಬ ನಿರ್ದೇಶನ ಇದ್ದರೂ ನಗರದ ನೂರಡಿ ರಸ್ತೆಯಲ್ಲಿನ ಕೆಲವು ಹೋಟೆಲ್‌ಗಳಲ್ಲಿ ಆಹಾರ ಸೇವನೆಗೆ ಅವಕಾಶ ನೀಡಲಾಗಿತ್ತು. ಇಲ್ಲಿಗೆ ದಿಢೀರನೇ ಭೇಟಿ ನೀಡಿದ ತಹಶೀಲ್ದಾರ್‌ ಚಂದ್ರಶೇಖರ್‌ ಶಂ. ಗಾಳಿ ಅವರು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ, ಮತ್ತೊಮ್ಮೆ ಇದೇ ರೀತಿ ಮಾಡಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದರು.

ಉಳಿದಂತೆ ದೊಡ್ಡಾಸ್ಪತ್ರೆ ಪಕ್ಕದಲ್ಲಿನ ರಸ್ತೆಯಲ್ಲಿ ಹೋಟೆಲ್‌ಗಳು ಪಾರ್ಸಲ್‌ಗಷ್ಟೇ ಸೀಮಿತಗೊಂಡಿದ್ದವು. ವೈನ್‌ಶಾಪ್‌, ಬಾರ್‌ಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶ ನೀಡಲಾಗಿತ್ತು.

ಸರ್ಕಾರದ ನಿಯಮದನ್ವಯ ಬುಧವಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಯಿತು. ರಾತ್ರಿ ಕರ್ಫ್ಯೂ ಇದ್ದರೂ ಅಂಗಡಿ ಮುಂಗಟ್ಟು ತೆರೆದಿದ್ದ ಕಾರಣ ಪೊಲೀಸರು ಗಸ್ತು ತಿರುಗಿ ಅಂಗಡಿ ಮುಚ್ಚಿಸಿದರು. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.