ETV Bharat / state

ಗ್ರಾಪಂ ಚುನಾವಣೆ ಮತ ಎಣಿಕೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಮಂಡ್ಯ ಡಿಸಿ - DC Dr. MV Venkatesh

ನಾಳೆ ಮಂಡ್ಯ ಜಿಲ್ಲೆಯ 230 ಗ್ರಾಪಂಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕೇಂದ್ರದ ಬಳಿ ಬಿಗಿ ಪೊಲೀಸ್​ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

DC Dr. MV Venkatesh
ಡಿಸಿ ಡಾ.ಎಂ.ವಿ.ವೆಂಕಟೇಶ್
author img

By

Published : Dec 29, 2020, 7:34 PM IST

ಮಂಡ್ಯ: ಕೊರೊನಾ ಆರ್ಭಟದ ನಡುವೆಯೂ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್​​ ಚುನಾವಣೆ ಯಶಸ್ವಿಯಾಗಿ ಮುಗಿದಿದ್ದು, ಮತ ಎಣಿಕೆ ಕಾರ್ಯ ನಾಳೆ‌ ಏಳು ತಾಲೂಕಿನ ಆಯಾ ಡಿ ಮಸ್ಟರಿಂಗ್ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮಂಡ್ಯ ಜಿಲ್ಲೆಯ 230 ಗ್ರಾಪಂಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, ಸಂಜೆ ವೇಳೆಗೆ ಎಲ್ಲಾ ಫಲಿತಾಂಶ ಹೊರ ಬೀಳಲಿದೆ. 230 ಗ್ರಾಪಂಗಳಲ್ಲಿ ಸ್ಪರ್ಧೆ ಮಾಡಿದ 8,013 ಅಭ್ಯರ್ಥಿಗಳ ಭವಿಷ್ಯ ನಾಳೆ ತಿಳಿಯಲಿದೆ ಎಂದರು.

ಒಟ್ಟು 230 ಗ್ರಾಮ ಪಂಚಾಯಿತಿಗಳಲ್ಲಿ 1481 ಕ್ಷೇತ್ರದಲ್ಲಿ ಚುನಾವಣೆ ನಡೆದಿದ್ದು, 149 ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆಯಾಗಿದೆ. ಮದ್ದೂರು ತಾಲೂಕಿನ ಕದಲೂರು ಗ್ರಾಪಂನಲ್ಲಿ‌ 12 ಸ್ಥಾನಗಳಿಗೂ ಅವಿರೋಧ ಆಯ್ಕೆಯಾಗಿದೆ ಎಂದು ಮಾಹಿತಿ ನೀಡಿದರು.

ಎಣಿಕೆ ಕೇಂದ್ರದ ವಿವರ:

1. ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಮಂಡ್ಯ.
2. ಹೆಚ್.ಕೆ.ವೀರಣ್ಣಗೌಡ ಕಾಲೇಜು, ಮದ್ದೂರು.
3. ಶಾಂತಿ ಪದವಿ ಪೂರ್ವ ಕಾಲೇಜು, ಮಳವಳ್ಳಿ.
4. ಪಿ.ಎಸ್.ಎಸ್.ಕೆ. ಪ್ರೌಢ ಶಾಲೆ, ರೈಲ್ವೆ ನಿಲ್ದಾಣ, ಪಾಂಡವಪುರ.
5. ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಶ್ರೀರಂಗಪಟ್ಟಣ.
6. ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಕೆ.ಆರ್‌. ಪೇಟೆ.
7. ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗಮಂಗಲ.

ಯಾವುದೇ ಅವಘಡ, ಗೊಂದಲಕ್ಕೆ ಅವಕಾಶ ಕೊಡದೆ ಮತ ಎಣಿಕೆ ಕಾರ್ಯಕ್ಕೆ ಸಜ್ಜುಗೊಂಡಿದ್ದು, ಮತ ಎಣಿಕೆ ಕೇಂದ್ರದ ಬಳಿ ಬಿಗಿ ಪೊಲೀಸ್​ ಬಂದೋಬಸ್ತ್ ಕಲ್ಪಿಸಲಾಗಿದೆ. ನಾಳೆ ಜಿಲ್ಲಾದ್ಯಾಂತ ನಿಷೇಧಾಜ್ಞೆ ಹೇರಲಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.