ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ 3.88ಗೆ ಇಳಿಕೆ ಹಿನ್ನೆಲೆ ನಾಳೆಯಿಂದ ಸಕ್ಕರೆ ನಾಡು ಮಂಡ್ಯವನ್ನು ಅನ್ಲಾಕ್ ಮಾಡಿ ಜಿಲ್ಲಾಧಿಕಾರಿ ಎಸ್. ಅಶ್ವಥಿ ಆದೇಶ ಹೊರಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ಅಂಗಡಿ-ಮುಂಗಟ್ಟು ಹಾಗೂ ಮಾರುಕಟ್ಟೆ ತೆರೆಯಲು ಬೆಳಗ್ಗೆ 6 ರಿಂದ ಸಂಜೆ 5ವರೆಗೆ ಅವಕಾಶ ಕಲ್ಪಿಸಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್, ಹೊಟೇಲ್, ಕ್ಲಬ್ಗಳಲ್ಲಿ ಕಾರ್ಯನಿರ್ವಹಿಸಲು ಶೇ 50 ರಷ್ಟು ಅವಕಾಶ ನೀಡಲಾಗಿದ್ದು, ಬಾರ್ಗಳಲ್ಲಿ ಪಾರ್ಸಲ್ಗೆ ಅನುಮತಿ ನೀಡಲಾಗಿದೆ ಎಂದರು.
ಸರ್ಕಾರಿ ಹಾಗೂ ಖಾಸಗಿ ಕಚೇರಿಯಲ್ಲಿ ಕೆಲಸ ನಿರ್ವಹಿಸಲು ಶೇ 50ರಷ್ಟು ಮಂದಿಗೆ ಅವಕಾಶ ನೀಡಲಾಗಿದೆ. ಎಸಿ ಇರುವ ಅಂಗಡಿ, ಶಾಪಿಂಗ್ ಮಾಲ್ಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬಸ್ಗಳಲ್ಲಿ ಶೇ 50ರಷ್ಟು ಪ್ರಯಾಣಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ಪ್ರತಿದಿನ ರಾತ್ರಿ 7 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದರು.
ಓದಿ:ಆ್ಯಂಬುಲೆನ್ಸ್ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ - ಚಿಕಿತ್ಸೆ ಫಲಿಸದೇ ಸಾವು