ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 195 ಜನರ ಫಲಿತಾಂಶದ ವರದಿ ಬರಬೇಕಿದೆ.
ಜಿಲ್ಲೆಯಲ್ಲಿ ಒಟ್ಟು 456 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಇಂದಿಗೆ 12 ಜನರಲ್ಲಿ ಕೋವಿಡ್-19 ದೃಢಪಟ್ಟಿದೆ. 249 ಮಂದಿಯ ವರದಿ ನೆಗೆಟಿವ್ ಬಂದಿವೆ. ಐಸೋಲೇಷನ್ ವಾರ್ಡ್ನಲ್ಲಿ 12 ಜನರಿದ್ದು, ಆಸ್ಪತ್ರೆಯ ಕ್ವಾರಂಟೈನ್ ವಾರ್ಡ್ನಲ್ಲಿ 8 ಜನರಿದ್ದಾರೆ. ಹಾಸ್ಟೆಲ್ ಕ್ವಾರಂಟೈನ್‌ನಲ್ಲಿ 104 ಜನರಿದ್ದು, 498 ಜನ ಹೋಂ ಕ್ವಾರಂಟೈನ್ನಲ್ಲಿದ್ದಾರೆ.