ETV Bharat / state

ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಿ : ಸಚಿವ ಡಾ. ನಾರಾಯಣಗೌಡ ಸೂಚನೆ

ಮಂಡ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಅವರು ಜಿಲ್ಲಾಧಿಕಾರಿ ಹಾಗೂ ತಾಲೂಕಾಧಿಕಾರಿಗಳ ಜೊತೆ ಸಭೆ ನಡೆಸಿದರು. ಬಳಿಕ ಕೊರೊನಾ ಪರೀಕ್ಷಾ ಪ್ರಮಾಣ ಹೆಚ್ಚಾಗಬೇಕು. ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವಂತೆ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಖಡಕ್ನ ಸೂಚನೆ ನೀಡಿದ್ರು.

Mandya Incharge minister Narayana gowda meeting with dc, taluk officers regarding second wave
ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಿ : ಸಚಿವ ಡಾ. ನಾರಾಯಣಗೌಡ ಸೂಚನೆ
author img

By

Published : Apr 21, 2021, 3:13 AM IST

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಪರೀಕ್ಷಾ ಪ್ರಮಾಣ ಹೆಚ್ಚಾಗಬೇಕು. ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರಬೇಕು. ಪ್ರತಿ ತಾಲೂಕಿನಲ್ಲೂ ಚಿಕಿತ್ಸೆಗೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ತಾಲೂಕು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಡಾ.ನಾರಾಯಣಗೌಡ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿ ಡಾ.ಅಶ್ವಥಿ ಹಾಗೂ ತಾಲೂಕು ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದರು. ಯಾವುದೆ ಪರಿಸ್ಥಿತಿಯಲ್ಲೂ ಜಿಲ್ಲೆಯಲ್ಲಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಇದೇ ವೇಳೆ ಸೂಚಿಸಿದರು. ಜಿಲ್ಲೆಯಲ್ಲಿರುವ ವೈದ್ಯಕೀಯ ವ್ಯವಸ್ಥೆ ಹಾಗೂ ಕೋವಿಡ್ ಟೆಸ್ಟಿಂಗ್ ಬಗ್ಗೆ ಜಿಲ್ಲಾಧಿಕಾರಿ ಡಾ. ಅಶ್ವಥಿ ವಿವರಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಸರಾಸರಿ ಪ್ರತಿನಿತ್ಯ 4 ಸಾವಿರ ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಆ ಪೈಕಿ ಶೇ.6 ರಷ್ಟು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿದೆ. ಇದುವರೆಗೆ 26,300 ಟೆಸ್ಟಿಂಗ್ ಮಾಡಲಾಗಿದ್ದು, 1,661 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಮಳವಳ್ಳಿ ತಾಲೂಕಿನಲ್ಲಿ 28 ಪಾಸಿಟಿವ್ ಕೇಸ್ ಇದೆ. ಚಿಕಿತ್ಸೆಗೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 62 ಸಾವಿರ, ದೆಹಲಿ 28 ಸಾವಿರಕ್ಕೂ ಅಧಿಕ.. ದೇಶದಲ್ಲಿ ಮೀತಿಮೀರಿದ ಕೊರೊನಾ ವೈರಸ್​!

ಶ್ರೀರಂಗಪಟ್ಟಣದಲ್ಲಿ 74 ಪಾಸಿಟಿವ್ ಕೇಸ್ ಇದ್ದು, 5 ಐಸಿಯು ಬೆಡ್, 50 ಆಕ್ಸಿಜನ್ ಬೆಡ್, 5 ವೆಂಟಿಲೇಟರ್ ವ್ಯವಸ್ಥೆ ಇದೆ. ವ್ಯದ್ಯಾಧಿಕಾರಿಗಳಿಗೆ ವಸತಿ ವ್ಯವಸ್ಥೆ ಕೂಡ ಮಾಡಲಾಗಿದೆ. ಪಾಂಡವಪುರದಲ್ಲಿ 151 ಪಾಸಿಟಿವ್ ಕೇಸ್ ಇದೆ. ಐಸಿಯು 6 ಬೆಡ್ ಇದೆ. 50 ಆಕ್ಸಿಜನ್ ಬೆಡ್ ಹಾಗೂ 3 ವೆಂಟಿಲೇರ್ ಬೆಡ್ ವ್ಯವಸ್ಥೆ ಇದೆ. ಕೆ.ಆರ್ ಪೇಟೆಯಲ್ಲಿ 122 ಪಾಸಿಟಿವ್ ಕೇಸ್, ಇದೆ. 3 ICU ಬೆಡ್ ಇದ್ದು ಇನ್ನೂ ಮೂರು ICU ವಾರದೊಳಗೆ ಸಿದ್ದವಾಗಲಿದೆ. ನಾಗಮಂಗಲದಲ್ಲಿ 63 ಪಾಸಿಟಿವ್ ಕೇಸ್ ಇದೆ. ನಿತ್ಯ 500 ಕ್ಕೂ ಹೆಚ್ಚು ಟೆಸ್ಟಿಂಗ್ ಮಾಡಲಾಗುತ್ತಿದೆ. ಮದ್ದೂರಿನಲ್ಲಿ 187 ಕೊರೊನಾ ಪ್ರಕರಣ ಇದೆ. 3 ಐಸಿಯು, 3 ವೆಂಟಿಲೇಟರ್ ಬೆಡ್ ಇದೆ. 30 ಆಕ್ಸಿಜನ್ ಬೆಡ್ ವ್ಯವಸ್ಥೆ ಇದೆ. ಮಂಡ್ಯದಲ್ಲಿ 495 ಕೊವಿಡ್ ಪಾಸಿಟಿವ್ ಕೇಸ್ ಇದೆ. ಒಂದು ವಾರದಲ್ಲಿ 4500 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. 52 ಐಸಿಯು ಬೆಡ್ ವ್ಯವಸ್ಥೆ ಇದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಇದನ್ನೂ ಓದಿ: ಕುವೆಂಪು ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ - ಕುಲಪತಿ ಪ್ರೊ.ವೀರಭದ್ರಪ್ಪ

ಪ್ರತಿ ತಾಲೂಕಿನಲ್ಲಿ ಸ್ಟೆಪ್ ಅಪ್ ಆಸ್ಪತ್ರೆ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, 200-500 ಬೆಡ್ ಹಾಕುವಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲ ತಾಲೂಕು ಆಸ್ಪತ್ರೆಯಲ್ಲಿ ಹಾಗೂ ಹಾಸ್ಟೆಲ್ ಗಳಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಮಾಸ್ಕ್ ಧರಿಸದವರಿಗೆ ದಂಡ ಹಾಕುವುದರ ಜೊತೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದ್ದು, ಸುಮಾರು 4 ಲಕ್ಷ ರೂ. ನಷ್ಟು ದಂಡವನ್ನು ವಸೂಲಿ ಮಾಡಲಾಗಿದೆ.

ಜಿಲ್ಲೆಯಲ್ಲಿ ಮದುವೆ, ಸಭೆ, ಸಮಾರಂಭಗಳು ನಡೆಯುವ ಸ್ಥಳಗಳ ಮೇಲೆ ಹೆಚ್ಚಿನ ನಿಗಾ ಇಡಬೇಕು. ಸಂಪೂರ್ಣವಾಗಿ ನಿಯಮ ಪಾಲನೆ ಆಗುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಜಿಲ್ಲೆಯಲ್ಲಿ ಪಿಪಿಇ ಕಿಟ್, ಗ್ಲೌಸ್, ಸ್ಯಾನಿಟೈಸರ್ ಸೇರಿದಂತೆ ಯಾವುದು ಕೂಡ ಕೊರತೆ ಆಗಬಾರದು. ಸಿಬ್ಬಂದಿ ಕೊರತೆ, ಆಂಬ್ಯುಲೆನ್ಸ್ ಅಗತ್ಯತೆ ಇದ್ದಲ್ಲಿ ತಕ್ಷಣವೆ ಮಾಹಿತಿ ನೀಡುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಕೋವಿಡ್‌ ಟೆಸ್ಟಿಂಗ್ ಪ್ರಮಾಣ ವಾರದೊಳಗೆ ದ್ವಿಗುಣವಾಗುವಂತೆ ಕ್ರಮ ವಹಿಸಿ. ಎಲ್ಲ ತಾಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸುತ್ತೇನೆ. ಭೇಟಿ ನೀಡಿದ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಕಂಡುಬರಬಾರದು. ಆ ದಿಶೆಯಲ್ಲಿ ಈಗಲೇೈ ಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸಚಿವರು ಖಡಕ್ಕಾಗಿ ಸೂಚನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.