ಮಂಡ್ಯ: ಈಗಾಗಲೇ ಗೌಡ್ತಿ ಹೇಳಿಕೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದು, ಹೇಳಿಕೆಯಿಂದ ನೊಂದ ಸುಮಲತಾಗೆ ಧೈರ್ಯ ತುಂಬಲು ಸ್ಟಾರ್ ನಟರು ದೂರವಾಣಿ ಮೂಲಕ ಲೋಕಸಭಾ ಚುನಾವಣೆಗೆ ಬೆಂಬಲದ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಹೌದು, ಈಗಾಗಲೇ ನಟ ದರ್ಶನ್ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದು, ಸುಮಲತಾ ಅವರಿಗೆ ಟಿಕೆಟ್ ನೀಡಿದರೆ ಅವರನ್ನು ಗೆಲ್ಲಿಸುವ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೆ ತಮಿಳು, ತೆಲಗು ಹಾಗೂ ಮಲಯಾಳಂ ಚಿತ್ರರಂಗದ ಮಹಾನ್ ತಾರೆಯರು ಕೂಡ ಬೆಂಬಲದ ಭರಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ನಟ ರಜನಿಕಾಂತ್, ಚಿರಂಜೀವಿ, ಕಮಲ್ ಹಾಸನ್, ಮೋಹನ್ ಬಾಬು ದೂರವಾಣಿ ಕರೆ ಮೂಲಕ ಆತ್ಮವಿಶ್ವಾಸ ತುಂಬಿದ್ದಾರೆ. ನಿಮ್ಮ ಜೊತೆ ಮಂಡ್ಯದ ಜನರೊಂದಿಗೆ ನಾವೂ ಇದ್ದೇವೆ ಎಂದು ಧೈರ್ಯ ಹೇಳಿದ್ದಾರೆ ಎನ್ನಲಾಗಿದೆ.
![undefined](https://s3.amazonaws.com/saranyu-test/etv-bharath-assests/images/ad.png)
ಚಿತ್ರರಂಗದ ತಾರೆಯರು ನೀಡಿರುವ ಈ ಭರವಸೆ ಈಗ ಅಭಿಮಾನಿಗಳಿಗೆ ಮತ್ತಷ್ಟು ಶಕ್ತಿ ತುಂಬಿದೆ. ಅವರು ಪ್ರಚಾರಕ್ಕೆ ಬರಬಹುದು ಎಂಬ ನಂಬಿಕೆ ಜನರಲ್ಲಿದೆ. ಹಾಗಾಗಿ ಚಿತ್ರರಂಗದ ದೊಡ್ಡ ದೊಡ್ಡ ಸ್ಟಾರ್ ನಟರ ಪ್ರಚಾರ ಮತ್ತೊಮ್ಮೆ ಸಕ್ಕರೆ ಜಿಲ್ಲೆಯಲ್ಲಿ ನಡೆಯಲಿದೆ.