ಮಂಡ್ಯ: ಪತ್ರಕರ್ತರಿಗೆ ಕೊರೊನಾ ತಪಾಸಣೆ ಮಾಡುವ ವೇಳೆ ಗುಂಪು ಕಟ್ಟಿಕೊಂಡು ಬಂದು ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ.
ನಗರದ ಅಂಬೇಡ್ಕರ್ ಭವನದಲ್ಲಿಂದು ಪತ್ರಕರ್ತರಿಗೆ ಕೋವಿಡ್-19 ಟೆಸ್ಟ್ ಇತ್ತು. ಆದರೆ ಅಂಬೇಡ್ಕರ್ ಭವನದ ಬಳಿಯೇ ವಿಧಾನಸಭಾ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರ ಮನೆಯಿದೆ. ಹೀಗಾಗಿ ಇಲ್ಲಿ ಟೆಸ್ಟ್ ಮಾಡಬೇಡಿ ಎಂದು ಕ್ಯಾತೆ ತೆಗೆದು ತಮ್ಮ ಬೆಂಬಲಿಗರನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದ್ದರು. ಇದೇ ವೇಳೆ ಕೆಟಿಎಸ್ ಪುತ್ರ ಪತ್ರಕರ್ತರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಹಾಗೂ ಅವರ ಪುತ್ರ ಕೃಷಿಕ್ ಗೌಡ ವಿರುದ್ಧ ಪೊಲೀಸರು ಪ್ರಕರಣ ದಾಖಸಿಕೊಂಡಿದ್ದರು.
ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ: ಎಂಎಲ್ಸಿ ಶ್ರೀಕಂಠೇಗೌಡ, ಪುತ್ರ ಕೃಷಿಕ್ಗೌಡ ವಿರುದ್ಧ ಪ್ರಕರಣ!
ಇದೀಗ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಪುತ್ರ ಕೃಷಿಕ್ ಗೌಡ ಸೇರಿದಂತೆ ಐವರಿಗೂ ಪ್ರಧಾನ ಸಿವಿಲ್ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ತಲಾ 10 ಸಾವಿರ ಬಾಂಡ್ ಪಡೆದು ಷರತ್ತುಬದ್ಧ ಜಾಮೀನು ನೀಡಿದ್ದಾರೆ.