ಮಂಡ್ಯ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಸ್ಥಾನದ ಚುನಾವಣೆ ಮೇ 9ರಂದು ನಡೆಯಲಿದೆ ಎಂದು ತಹಶೀಲ್ದಾರ್ ಚಂದ್ರಶೇಖರ್ ಗಾಳಿ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 7 ತಾಲೂಕಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಯಲಿದ್ದು, ಒಟ್ಟು 24,204 ಮತದಾರರಿದ್ದಾರೆ. ಏಪ್ರಿಲ್ 7ರ ವರೆಗೆ ನಾಮಪತ್ರ ಸ್ವೀಕರಿಸಲಾಗುವುದು. ಏ.8ರಂದು ನಾಮಪತ್ರಗಳ ಪರಿಶೀಲನೆ ನಡೆಸಿ, ಏ.12ಕ್ಕೆ ನಾಮಪತ್ರ ವಾಪಸ್ ಪಡೆಯಲು ಅವಧಿ ನೀಡಲಾಗುವುದು. ಮೇ. 9ರಂದೇ ಮತದಾನ ಮುಗಿದ ಬಳಿಕ ಮತ ಎಣಿಕೆ ಕಾರ್ಯ ನಡೆಸಲಾಗುವುದು ಎಂದರು.
ಇನ್ನು, ರಾಜ್ಯದಲ್ಲೇ ಅತಿ ಹೆಚ್ಚು ಮತದಾರರ ಸಂಖ್ಯೆಯನ್ನು ಮಂಡ್ಯ ಜಿಲ್ಲೆ ಹೊಂದಿದೆ. ಅಭ್ಯರ್ಥಿಗಳು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ವಹಿಸಬೇಕು. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.
ತಾಲೂಕುವಾರು ಮತದಾರರ ವಿವರ:
ಮಂಡ್ಯ- 11,616
ಮದ್ದೂರು-3,224
ಮಳವಳ್ಳಿ -2,129
ಪಾಂಡವಪುರ- 2,755
ಶ್ರೀರಂಗಪಟ್ಟಣ- 1,644
ಕೆ.ಆರ್.ಪೇಟೆ -1,672
ನಾಗಮಂಗಲ-1,164
ಓದಿ: ನಿವೃತ್ತ ಯೋಧರಿಗೆ ಜಮೀನು ಮಂಜೂರು ವಿಳಂಬ : ಮೈಸೂರು ಜಿಲ್ಲಾಧಿಕಾರಿ ರೋಹಿಣಿಗೆ ಹೈಕೋರ್ಟ್ ತರಾಟೆ