ETV Bharat / state

ಮೇಲುಕೋಟೆಗೆ ಪ್ರವಾಸಿಗರಿಗೆ ನಿರ್ಬಂಧ; ಸ್ವಚ್ಛಗೊಳ್ಳುತ್ತಿದೆ ಮದ್ದೂರು ಪಟ್ಟಣ - ಮದ್ದೂರು ಪಟ್ಟಣದಲ್ಲಿ ಸ್ವಚ್ಛತೆ ಹಾಗೂ ಫಾಗಿಂಗ್

ಕೊರೊನಾ ತಡೆ ನಿಟ್ಟಿನಲ್ಲಿ ಮದ್ದೂರು ಪಟ್ಟಣದಲ್ಲಿ ಪುರಸಭೆ ವತಿಯಿಂದ ಸ್ವಚ್ಛತೆ ಹಾಗೂ ಫಾಗಿಂಗ್ ಕೆಲಸ ನಡೆಯಿತು. ಇತ್ತ ಮೇಲುಕೋಟೆಯಲ್ಲಿ ಪ್ರವಾಸಿಗರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರಿಗೆ ದಿಗ್ಬಂಧನ ವಿಧಿಸಲಾಗಿದೆ.

Mandya lockdown; cleaning and fogging
ಮೇಲುಕೋಟೆಗೆ ನಿರ್ಬಂಧ; ಸ್ವಚ್ಛಗೊಳ್ಳುತ್ತಿರುವ ಮದ್ದೂರು ಪಟ್ಟಣ
author img

By

Published : Mar 29, 2020, 11:47 AM IST

ಮಂಡ್ಯ: ಕೊರೊನಾ ವೈರಸ್​ ವಿರುದ್ಧ ಹಳ್ಳಿಗರು ಸೇರಿದಂತೆ ನಗರ ಪ್ರದೇಶದಲ್ಲೂ ಎಚ್ಚರಿಕೆ ಕ್ರಮಗಳನ್ನು ವಹಿಸಲಾಗುತ್ತಿದ್ದು, ಮದ್ದೂರು ಪಟ್ಟಣದಲ್ಲಿ ಪುರಸಭೆ ವತಿಯಿಂದ ಸ್ವಚ್ಛತೆ ಹಾಗೂ ಫಾಗಿಂಗ್ ಕಾರ್ಯ ಮಾಡಲಾಯಿತು.

ಪ್ರಮುಖ ರಸ್ತೆಗಳಲ್ಲಿ ಅಗ್ನಿಶಾಮಕ ಸಿಬ್ಬಂದಿಯ ಸಹಾಯದೊಂದಿಗೆ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ ಮಾಡಿದ ಪುರಸಭೆ ಅಧಿಕಾರಿಗಳು, ನಂತರ ಫಾಗಿಂಗ್ ನಡೆಸಿ ಸೊಳ್ಳೆಗಳ ನಿಯಂತ್ರಣಕ್ಕೆ ಮುಂದಾದ್ರು. ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್​ಗಳಲ್ಲೂ ಸ್ವಚ್ಛತೆ ಕೈಗೊಳ್ಳಲಾಗುತ್ತಿದೆ.

ಮೇಲುಕೋಟೆಗೆ ನಿರ್ಬಂಧ; ಸ್ವಚ್ಛಗೊಳ್ಳುತ್ತಿರುವ ಮದ್ದೂರು ಪಟ್ಟಣ

ಇತ್ತ ಮೇಲುಕೋಟೆಯಲ್ಲಿ ಪ್ರವಾಸಿಗರೂ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರಿಗೆ ಗೃಹ ಬಂಧನ ವಿಧಿಸಲಾಗಿದೆ. ಮೇಲುಕೋಟೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗೆ ಬ್ಯಾರಿಕೇಡ್ ಹಾಕಿ, ಪಾಳಿ ಆಧಾರದ ಮೇಲೆ ಗ್ರಾಮಸ್ಥರು ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕುತ್ತಿದ್ದಾರೆ.

ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೇಲುಕೋಟೆಗೆ ಆಗಮಿಸುತ್ತಿದ್ದರು. ಇಂದಿನಿಂದ ಮೇಲುಕೋಟೆ ವೈರಮುಡಿ ಉತ್ಸವ ನಡೆಯುವ ಹಿನ್ನೆಲೆಯಲ್ಲಿ ಭಕ್ತರ ಆಗಮನವೂ ಹೆಚ್ಚುವ ನಿರೀಕ್ಷೆಯಿತ್ತು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಕ್ಕೆ ನಿರ್ಬಂಧ ಹೇರಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.