ಮಂಡ್ಯ: ಶೌಚಾಲಯದ ನಿರ್ಮಾಣ ಹಂತ ಗೋಡೆ ಕುಸಿದು ಕಾರ್ಮಿಕ ಗಾಯಗೊಂಡ ಘಟನೆ ಮಳವಳ್ಳಿ ತಾಲೂಕಿನ ಶಿವನಸಮುದ್ರದಲ್ಲಿ ನಡೆದಿದೆ.
ಕಳಪೆ ಕಾಮಗಾರಿಯಿಂದ ನಿರ್ಮಾಣ ಹಂತದ ಗೋಡೆ ಕುಸಿದು ಚಾಮರಾಜನಗರ ಜಿಲ್ಲೆಯ ಕಾರ್ಮಿಕ ಸಂತೇಗಾಲದ ಸಿದ್ದರಾಮ ಎಂಬವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಳವಳ್ಳಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಶಿವನಸಮುದ್ರ ಗ್ರಾಮದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಈ ಶೌಚಾಲಯ ನಿರ್ಮಾಣ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಕಳಪೆ ಕಾಮಗಾರಿಯಿಂದ ಗೋಡೆ ಕುಸಿದಿದೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.