ಮಂಡ್ಯ: ರಸ್ತೆ ಗುಂಡಿ ಮುಚ್ಚಿ, ನಂತರ ವಾಹನ ಸವಾರರಿಗೆ ದಂಡ ಹಾಕಿ, ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದವರಿಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ನೀಡಿದ್ದು, ರಸ್ತೆಯಲ್ಲಿ ಗುಂಡಿ ಇದೆ ಎಂದು ಕುಡಿದು ವಾಹನ ಚಾಲನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ನೂತನ ಕಚೇರಿ ಉದ್ಘಾಟನೆ ಮಾಡಿ ಮಾತನಾಡಿ, ಕುಡಿದು ವಾಹನ ಚಾಲನೆ, ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.
ಅಂಬರೀಶ್ ಅವರು ಈ ಕೊಠಡಿಯನ್ನೇ ಕಚೇರಿ ಮಾಡಿಕೊಂಡಿದ್ದರು, ಈಗ ನನಗೆ ಸಿಕ್ಕಿರುವುದು ಪುಣ್ಯ. ಜನರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕಚೇರಿ ಆರಂಭ ಮಾಡಲಾಗಿದೆ. ನನ್ನಿಂದ ಕೆಲವರಿಗಾದರೂ ಅನುಕೂಲವಾದರೆ ಉತ್ತಮ ಎಂದು ಹೇಳಿದರು.